ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ (Winter Parliament Session) ಅಶಿಸ್ತಿನ ನಡವಳಿಕೆ ಹಿನ್ನೆಲೆ 141 ಸಂಸದರನ್ನು (MP) ಅಮಾನತುಗೊಳಿಸಿದ ಕುರಿತು ಕಾಂಗ್ರೆಸ್ ಸಂಸದೀಯ ಪಕ್ಷದ (CPP) ಮುಖ್ಯಸ್ಥೆ ಸೋನಿಯಾ ಗಾಂಧಿ (Sonia Gandhi) ಪ್ರತಿಕ್ರಿಯಿಸಿದ್ದು, ನರೇಂದ್ರ ಮೋದಿ (Narendra Modi) ಸರ್ಕಾರ ಪ್ರಜಾಪ್ರಭುತ್ವದ ಕತ್ತು ಹಿಸುಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿರೋಧ ಪಕ್ಷದ 141 ಸಂಸದರನ್ನು ಸರ್ಕಾರ ಅಮಾನತುಗೊಳಿಸಿರುವುದನ್ನು ಖಂಡಿಸಿದ ಅವರು, ಸಂಪೂರ್ಣವಾಗಿ ಸಮಂಜಸವಾದ ಮತ್ತು ನ್ಯಾಯಸಮ್ಮತವಾದ ಬೇಡಿಕೆಗೆ ಒತ್ತಾಯಿಸಿದ್ದಕ್ಕಾಗಿ ಹಿಂದೆಂದೂ ಇಷ್ಟು ವಿರೋಧ ಪಕ್ಷದ ಸಂಸದರನ್ನು ಸದನದಿಂದ ಅಮಾನತುಗೊಳಿಸಿಲ್ಲ ಎಂದು ವಾಗ್ದಾಳಿ ನಡೆಸಿದರು.
Winter Health: ಚಳಿಗಾಲದಲ್ಲಿ ಗಂಟಲು ನೋವು, ಕೆಮ್ಮು ಸಮಸ್ಯೆಯೇ?: ಈ ವಸ್ತುಗಳನ್ನ ತಯಾರಿಸಿ ಟೀ ಕುಡಿದು ನೋಡಿ!
ಡಿಸೆಂಬರ್ 13ರಂದು ಸಂಸತ್ ಭವನದಲ್ಲಿ ನಡೆದ ಭದ್ರತಾ ಉಲ್ಲಂಘನೆ (Security Breach) ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah)ಅವರಿಂದ ಹೇಳಿಕೆ ನೀಡುವಂತೆ ವಿಪಕ್ಷ ನಾಯಕರು ಒತ್ತಾಯಿಸಿದ್ದಾರೆ. ಭದ್ರತಾ ಲೋಪದ ಕುರಿತು ಅಮಿತ್ ಶಾ ಹೇಳಿಕೆ ಕೊಡಬೇಕಾಗಿತ್ತು ಎಂದು ಸಂಸದರನ್ನು ಬೆಂಬಲಿಸಿದರು.