ಬೆಂಗಳೂರು: ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ನರೇಂದ್ರ ಮೋದಿ ಅವರಿಗೆ ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ್ ಅಭಿನಂದನೆ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ ಸತತ 3ನೇ ಅವಧಿಗೆ ಭಾರತದ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮೋದಿಗೆ ಅಭಿನಂದನೆ ಸಲ್ಲಿಸಿದ್ದಾರೆ,
Muskmelon Seeds: ಕರ್ಬೂಜ ಹಣ್ಣಿನ ಬೀಜಗಳಿಂದ ಎಷ್ಟೆಲ್ಲಾ ಅದ್ಭುತ ಪ್ರಯೋಜನಗಳಿವೆ ಗೊತ್ತಾ..?
ಕಳೆದ ಎರಡು ಅವಧಿಯಲ್ಲಿ ಕೇಂದ್ರದಲ್ಲಿ ಬಿಜೆಪಿ ಬಹುಮತದ ಸರ್ಕಾರ ನಡೆಸಿತ್ತು. ಈ ಬಾರಿ ಮೋದಿ ಸಮ್ಮಿಶ್ರ ಸರ್ಕಾರವನ್ನು ಮುನ್ನಡೆಸಬೇಕಿದೆ. 73 ವಯಸ್ಸಿನ ಮೋದಿ ಈ ಮೂಲಕ ದೇಶದ ಮೊದಲ ಪ್ರಧಾನಿ ಜವಾಹರ ಲಾಲ್ ನೆಹರು ಅವರನ್ನು ಸರಿಗಟ್ಟಲಿದ್ದಾರೆ. ನೆಹರು 1952, 1957 ಮತ್ತು 1962ರಲ್ಲಿ ಸತತ ಮೂರು ಸಾರ್ವತ್ರಿಕ ಚುನಾವಣೆ ಗೆದ್ದು ಪ್ರಧಾನಿಯಾಗಿದ್ದರು.