ನವದೆಹಲಿ/ಉಡುಪಿ:- ಮೂರನೇ ಬಾರಿಗೆ ಇಂದುಪ್ರಧಾನಿಯಾಗಿ ನರೇಂದ್ರ ಮೋದಿ ಪದಗ್ರಹಣ ಮಾಡಲಿದ್ದಾರೆ. ಇಂದು ಸಂಜೆ 7ಗಂಟೆ 15 ನಿಮಿಷಕ್ಕೆ ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ಮೋದಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಲಿದ್ದಾರೆ. ಮೋದಿ ಪದಗ್ರಹಣ ಕಾರ್ಯಕ್ರಮಕ್ಕೆ ಪೇಜಾವರಶ್ರೀಗಳಿಗೂ ಆಹ್ವಾನ ಸಿಕ್ಕಿದ್ದು ಬೆಳಗ್ಗೆ 11.30ಕ್ಕೆ ಕೆಂಪೇಗೌಡ ಏರ್ಪೋರ್ಟ್ನಿಂದ ದೆಹಲಿಗೆ ಶ್ರೀಗಳು ತೆರಳಲಿದ್ದಾರೆ.
Karnataka weather: ಇಂದಿನಿಂದ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ.. ಯೆಲ್ಲೋ ಅಲರ್ಟ್ ಘೋಷಣೆ!
ತಡರಾತ್ರಿ ಪ್ರಧಾನಮಂತ್ರಿ ಕಚೇರಿಯಿಂದ ಕರೆ ಮಾಡಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಗೆ ಆಹ್ವಾನ ಮಾಡಲಾಗಿದೆ. ಹೀಗಾಗಿ ಇಂದು ಬೆಳಗ್ಗೆ 11.30ಕ್ಕೆ ಕೆಂಪೇಗೌಡ ಏರ್ಪೋರ್ಟ್ನಿಂದ ದೆಹಲಿಗೆ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತೆರಳಲಿದ್ದಾರೆ. ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ದಾವಣಗೆರೆಯಸಮಾಜ ಸೇವಕ & ಬಿಜೆಪಿ ಮುಖಂಡ ಡಾ.ನಸೀರ್ ಅಹ್ಮದ್ ಅವರಿಗೂ ಪಿಎಂಒ ಅಧಿಕೃತ ಆಹ್ವಾನ ನೀಡಿದೆ. ಪ್ರಧಾನಮಂತ್ರಿಗಳ ಕಾರ್ಯಾಲಯ, ಬಿಜೆಪಿ ಕಚೇರಿಯಿಂದ ದೂರವಾಣಿ ಕರೆ ಮಾಡಿ ಅಧಿಕೃತ ಆಹ್ವಾನ ನೀಡಲಾಗಿದೆ. ರಾಜ್ಯ ಯೋಜನಾ ಪ್ರಾಧಿಕಾರದ ಮಾಜಿ ಸದಸ್ಯರಾಗಿರುವ ಡಾ.ನಸೀರ್ ಬೆಳಗ್ಗೆ ಹುಬ್ಬಳ್ಳಿ ಏರ್ಪೋರ್ಟ್ನಿಂದ ದೆಹಲಿಗೆ ತೆರಳಲಿದ್ದಾರೆ.
ಮೋದಿ 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಕಾರ್ಯಕ್ರಮಕ್ಕೆ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಆಹ್ವಾನ ನೀಡಲಾಗಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)