ನವದೆಹಲಿ:- ಕೆಲವೇ ಕ್ಷಣಗಳಲ್ಲಿ ಮೂರನೇ ಬಾರಿ ಪ್ರಧಾನಿಯಾಗಿ ನರೇಂದ್ರ ಮೋದಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.
World Cup 2024: ಭಾರತ- ಪಾಕ್ ಹೈವೋಲ್ಟೇಜ್ ಮ್ಯಾಚ್ ಗೆ ಕ್ಷಣಗಣನೆ ಶುರು..!
ಮೋದಿ ಪಟ್ಟಾಭಿಷೇಕಕ್ಕೆ ಇನ್ನೇನು ಕ್ಷಣಗಣನೆ ಆರಂಭವಾಗಿದೆ. ಎನ್ಡಿಎ ಮಿತ್ರರೊಂದಿಗೆ ಮತ್ತೊಮ್ಮೆ ದೇಶ ಆಳಲಿರುವ ಮೋದಿ ಸರ್ವಾನುಮತದಿಂದ ಆಡಳಿತ ಚುಕ್ಕಾಣಿ ಹಿಡಿಯಲಿದ್ದಾರೆ.
ಇಂದು ಸಂಜೆ 7ಗಂಟೆ 15 ನಿಮಿಷಕ್ಕೆ ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ಮೋದಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಲಿದ್ದಾರೆ. ಇನ್ನು ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದೆ.
ಇಂದು ಸಂಜೆ 7.15ಕ್ಕೆ 3ನೇ ಬಾರಿಗೆ ಪ್ರಧಾನಿಯಾಗಿ ಮೋದಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇನ್ನು ಈ ಪದಗ್ರಹಣ ಕಾರ್ಯಕ್ರಮಕ್ಕೆ ದೇಶ-ವಿದೇಶದ ಪ್ರಮುಖ ನಾಯಕರು ಬಾಗಿಯಾಗಲಿದ್ದಾರೆ. ಅದರಲ್ಲೂ ಮುಖ್ಯವಾಗಿ ಈ ಬಾರಿ ತೃತೀಯಲಿಂಗಿ ಸಮುದಾಯದವರಿಗೆ ಆಹ್ವಾನ ನೀಡಲಾಗಿದೆ. ದೇಶದ ವಿವಿಧ ಭಾಗಗಳ ತೃತೀಯಲಿಂಗಿ ಸಮುದಾಯದವರಿಗೆ ಆಹ್ವಾನ ನೀಡಿರುವುದು ವಿಶೇಷವಾಗಿದೆ.