ಪಂಜಾಬ್‌ನಲ್ಲಿ ಭದ್ರತಾ ಲೋಪದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ನಾನು ಜೀವಂತವಾಗಿ ವಿಮಾನ ನಿಲ್ದಾಣಕ್ಕೆ ಮರಳಲು ಸಾಧ್ಯವಾಯಿತು. ಪಂಜಾಬ್ ಮುಖ್ಯಮಂತ್ರಿಗೆ ಧನ್ಯವಾದಗಳು” ಎಂದು ಅವರು ಮಾರ್ಮಿಕವಾಗಿ ಹೇಳಿದರು. ಭಟಿಂಡಾ ವಿಮಾನ ನಿಲ್ದಾಣದ ಅಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಈ ಮಾತುಗಳನ್ನಾಡಿದ್ದಾರೆ. ಪಂಜಾಬ್‌ನ ಫಿರೋಜ್‌ಪುರದಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಭಟಿಂಡಾಗೆ ಆಗಮಿಸಿದರು.
