ಬೆಳಗಾವಿ:– ಕರ್ನಾಟಕಕ್ಕೆ ಇಂದು ನರೇಂದ್ರ ಮೋದಿ ಆಗಮಿಸಲಿದ್ದು, 4 ಕಡೆ ರ್ಯಾಲಿ ಮಾಡಲಿದ್ದಾರೆ. ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ ಹಿನ್ನೆಲೆ ಶನಿವಾರ ರಾತ್ರಿಯೇ ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗಾವಿಗೆ ಆಗಮಿಸಿ, ಕಾಕತಿ ಬಳಿಯ ಹೋಟೆಲ್ನಲ್ಲಿ ತಂಗಿದ್ದಾರೆ. ಪ್ರಧಾನಿ ಮೋದಿ ಅವರು ಇಂದು ಬೆಳಗಾವಿ, ದಾವಣಗೆರೆ, ಹೊಸಪೇಟೆ, ಶಿರಸಿಯಲ್ಲಿ ನಡೆಯುವ ನಾಲ್ಕು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಬೆಳಗ್ಗೆ 10.55ಕ್ಕೆ ಹೋಟೆಲ್ನಿಂದ ಹೊರಡುವ ಪ್ರಧಾನಿ ಮೋದಿ, 11 ಗಂಟೆಗೆ ಬೆಳಗಾವಿಯ ಮಾಲಿನಿ ಸಿಟಿ ಮೈದಾನದ ನಡಯುವೆ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. 11.55ಕ್ಕೆ ಬೆಳಗಾವಿಯಿಂದ ಹೊರಟು 12.55ಕ್ಕೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ತಲುಪಲಿದ್ದಾರೆ.
IPL 2024: ಲಕ್ನೊ ವಿರುದ್ಧ ರಾಜಸ್ಥಾನ್ಗೆ 7 ವಿಕೆಟ್ ಭರ್ಜರಿ ಜಯ, ಪ್ಲೇಆಫ್ ಹತ್ತಿರದಲ್ಲಿ ಸಂಜು ಬಳಗ..!
ಬಳಿಕ ಶಿರಸಿಯಿಂದ ಮಧ್ಯಾಹ್ನ 2 ಗಂಟೆಗೆ ಹೊರಟು 2.50ಕ್ಕೆ ದಾವಣಗೆರೆಗೆ ಆಗಮಿಸಲಿದ್ದು, ದಾವಣಗೆರೆ ಸಮಾವೇಶದಲ್ಲಿ ಭಾಗವಹಿಸಿ, ನಂತರ ಸಂಜೆ 4.50ಕ್ಕೆ ಹೊಸಪೇಟೆ ತಲುಪಲಿದ್ದಾರೆ
ಏಪ್ರಿಲ್ 29ರ ಬೆಳಗ್ಗೆ 11 ಗಂಟೆಗೆ ಹೊಸಪೇಟೆಯಿಂದ ಹೊರಟು ಮಧ್ಯಾಹ್ನ 12.05ಕ್ಕೆ ಬಾಗಲಕೋಟೆಗೆ ತಲುಪಿ ಮಧ್ಯಾಹ್ನ 12.15ಕ್ಕೆ ಬಾಗಲಕೋಟೆಯ ತೋಟಗಾರಿಕೆ ವಿವಿ ಮೈದಾನದಲ್ಲಿ ನಡೆಯುವ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಿ, ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡಲಿದ್ದಾರೆ.