ಬಾಗಲಕೋಟೆ: ರೈತ ಸಾಲ ಮನ್ನಾ ಮಾಡಲು ಯಾವುದೇ ಕಾರಣಕ್ಕೂ ಒಪ್ಪದ ಮೋದಿ ಅತ್ಯಂತ ಶ್ರೀಮಂತ ಬಂಡವಾಳಶಾಹಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ. ಆದರೆ ಮೋದಿಯವರು ಬಡ ಭಾರತೀಯರನ್ನು ನಂಬಿಸಿದ್ದ, ಭಾಷಣಗಳಲ್ಲಿ ಹೇಳಿದ ಯಾವುದೇ ಭರವಸೆಗಳನ್ನು ಈಡೇರಿಸದೇ ‘ಸುಳ್ಳಿನ ಸರದಾರ’ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
ಇದೇ ವೇಳೆ ಬಿಜೆಪಿಯಿಂದ ಕುರುಬರಿಗೆ ಟಿಕೆಟ್ ನೀಡದ ಮೋದಿ ಕಂಬಳಿ ಹಾಕಿಕೊಂಡು ನಾಟಕ ಮಾಡ್ತಾರೆ ಎಂದು ಆರೋಪಿಸಿದ್ದಾರೆ. ಬಾಗಲಕೋಟೆ ಲೋಕಸಭಾ ಕ್ಷೇತ್ರ ದಲ್ಲಿ ಪ್ರಜಾಧ್ವನಿ-02 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿ ಸಂಯುಕ್ತ ಪಾಟೀಲ್ ಅವರ ಪರವಾಗಿ ಮತದಾರರಲ್ಲಿ ಮತ ಯಾಚಿಸಿ ಮಾತನಾಡಿದರು.
Car airbags: ನಿಮ್ಮ ಕಾರಿನಲ್ಲಿರುವ ಏರ್ʼಬ್ಯಾಗ್ ಅಸಲಿಯೋ, ನಕಲಿಯೋ ತಿಳಿಯುವುದೇಗೆ ಗೊತ್ತಾ..? ಈ ಸ್ಟೋರಿ ನೋಡಿ
ಕಾಂಗ್ರೆಸ್ ನವರು ಶಿವಾಜಿ ಮಹಾರಾಜರು ಹಾಗೂ ಕಿತ್ತೂರು ರಾಣಿ ಚೆನ್ನಮ್ಮನಿಗೆ ಗೌರವ ನೀಡಲಿಲ್ಲ ಎಂದು ಮೋದಿಯವರು ಸುಳ್ಳು ಹೇಳಿದ್ದರು , ಆದರೆ ಸರ್ಕಾರದ ವತಿಯಿಂದ ಕಿತ್ತೂರು ಚೆನ್ನಮ್ಮ ದಿನಾಚರಣೆಯನ್ನು ಆಚರಿಸಬೇಕೆಂಬ ಆದೇಶವನ್ನು ಮಾಡಿದ್ದು ನಮ್ಮ ಕಾಂಗ್ರೆಸ್ ಸರ್ಕಾರವೇ. ಮೋದಿಯವರು ಕರಿಕಂಬಳಿ ವೇಷ ಹಾಕಿಕೊಂಡು ಭಾಷಣ ಮಾಡಿರುವುದು ಕೇವಲ ನಾಟಕವೇ ಹೊರತು, ಕುರುಬ ಸಮುದಾಯದ ಮೇಲಿನ ಪ್ರೀತಿಯಿಂದಲ್ಲ. ಇವರ ವೇಷ ಭೂಷಣ ನಾಟಕಗಳು ಭಾರತೀಯರಿಗೆ ಈಗ ಅರ್ಥವಾಗಿದೆ ಎಂದು ಹೇಳಿದರು.