2024ರ ಟಿ20 ವಿಶ್ವಕಪ್ಗೆ ಟೀಂ ಇಂಡಿಯಾದಲ್ಲಿ ಮೊಹಮ್ಮದ್ ಶಮಿ ಅವರನ್ನು ಆಯ್ಕೆ ಮಾಡಲು ಬಿಸಿಸಿಐ ಚಿಂತಿಸುತ್ತಿದೆ. ಅವರ ಆರೋಗ್ಯ ಸುಧಾರಿಸಿದ ನಂತರ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ಕಳುಹಿಸಲಾಗುವುದು ಎಂದು ಬಿಸಿಸಿಐ ತಿಳಿಸಿದೆ.
ಶಮಿ ಮುಂಬರುವ ಐಪಿಎಲ್ನಿಂದ ಹೊರಗುಳಿಯಲ್ಲಿದ್ದಾರೆ. ಐಪಿಎಲ್ನಲ್ಲಿ ಗುಜರಾತ್ ಟೈಟಾನ್ಸ್ ಪರ ಆಡುತ್ತಿರುವ ಶಮಿ, ಲೀಗ್ನಿಂದ ಹೊರಬಿದ್ದಿರುವುದು ಗುಜರಾತ್ ಟೈಟಾನ್ಸ್ ತಂಡಕ್ಕೆ ಆಘಾತ ಉಂಟು ಮಾಡಿದೆ. 2022ರಲ್ಲಿ ಮೊಹಮ್ಮದ್ ಶಮಿಯನ್ನು 6.25 ಕೋಟಿ ರೂ.ಗೆ ಗುಜರಾತ್ ಟೈಟಾನ್ಸ್ ಖರೀದಿಸಿತ್ತು.
ತಂಡದ ಪರ 2022 ಮತ್ತು 2023 ಆವೃತ್ತಿಯಲ್ಲಿ 33 ಪಂದ್ಯಗಳನ್ನು ಆಡಿರುವ ಶಮಿ ಇದರಲ್ಲಿ 48 ವಿಕೆಟ್ ಪಡೆದಿದ್ದಾರೆ. 2023ರಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಕೂಡ ಅವರಾಗಿದ್ದಾರೆ. ಈ ಆವೃತ್ತಿಯಲ್ಲಿ ಆಡಿದ್ದ 17 ಪಂದ್ಯಗಳಲ್ಲಿ 28 ವಿಕೆಟ್ಗಳನ್ನು ಕಬಳಿಸಿದ್ದು, ಇದೀಗ ಅವರು ಸಂಪೂರ್ಣ ಐಪಿಎಲ್ನಿಂದ ಹೊರಗುಳಿದಿದ್ದಾರೆ.