ಬೆಂಗಳೂರು : ಮೊಹಮ್ಮದ್ ಸಿರಾಜ್ ಟೀಂ ಇಂಡಿಯಾದ ಬೆಂಕಿ ಚೆಂಡು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕರೆದಿದ್ದಾರೆ.
https://x.com/DKShivakumar/status/1703408430927503463?s=20

ಶ್ರೀಲಂಕಾದ ಕೊಲೊಂಬೋದಲ್ಲಿ ನಡೆದ 8ನೇ ಆವೃತ್ತಿ ಏಷಿಯಾ ಕಪ್-2023 ರಲ್ಲಿ ಲಂಕಾವನ್ನು ಸಾಧಾರಣ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಭಾರತದ ಬೌಲರ್ ಸಿರಾಜ್ ಪ್ರಮುಖ ಪಾತ್ರವಹಿಸಿ ಭಾರತದ ಭರ್ಜರಿ ಗೆಲುವಿಗೆ ಕಾರಣರಾಗಿದ್ದಾರೆ. ಕುರಿತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡು ಭಾರತ ತಂಡಕ್ಕೆ ಶುಭಕೋರಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ಡಿಕೆಶಿ, ಮೊಹಮ್ಮದ್ ಸಿರಾಜ್ ಟೀಂ ಇಂಡಿಯಾದ ಬೆಂಕಿ ಚೆಂಡು ಎಂದು ಕರೆದಿದ್ದಾರೆ. ಸಿರಾಜ್ ಅವರ ಬೌಲಿಂಗ್ ದಾಳಿ ಕಂಡು ಬೆರಗಾದೆ. ಟೀಂ ಇಂಡಿಯಾ ಕಲಿಗಳ ಗೆಲುವಿನ ನಾಗಾಲೋಟ ಹೀಗೇ ಮುಂದುವರಿಯಲಿ. ಜೈಹೋ ಟೀಂ ಇಂಡಿಯಾ! ಎಂದು ಶುಭ ಹಾರೈಸಿದ್ದಾರೆ.
