ಭೋಪಾಲ್ : ಮಧ್ಯಪ್ರದೇಶದ (Madhya Pradesh) ನೂತನ ಮುಖ್ಯಮಂತ್ರಿಯಾಗಿ ಡಾ.ಮೋಹನ್ ಯಾದವ್ (Mohan Yadav) ಅಧಿಕಾರ ಸ್ವೀಕರಿಸಿದ್ದಾರೆ. ಮುಖ್ಯಮಂತ್ರಿಯವರೊಂದಿಗೆ ಅವರ ಸಂಪುಟದ ಇಬ್ಬರು ಉಪಮುಖ್ಯಮಂತ್ರಿಗಳಾಗಿ ರಾಜೇಂದ್ರ ಶುಕ್ಲಾ ಮತ್ತು ಜಗದೀಶ್ ದಿಯೋರಾ ಕೂಡ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಮಂಗುಭಾಯಿ ಸಿ. ಪಟೇಲ್ ಪ್ರಮಾಣವಚನ ಬೋಧಿಸಿದರು.
ಹದಿನೆಂಟು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan) ಅವರನ್ನು ಕೈ ಬಿಟ್ಟು ಬಿಜೆಪಿ ಹೈಕಮಾಂಡ್ (BJP High Command) ಮುಖ್ಯಮಂತ್ರಿ ಹುದ್ದೆಗೆ ಡಾ.ಮೋಹನ್ ಯಾದವ್ ಹೆಸರನ್ನು ಪರಿಗಣಿಸುವ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿತ್ತು. ಮೂರು ಬಾರಿ ಶಾಸಕರಾಗಿರುವ ಡಾ.ಮೋಹನ್ ಯಾದವ್ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ ಅಲ್ಲದೇ ಸಂಘದ ಜೊತೆಗೆ ಗುರಿತಿಸಿಕೊಂಡಿದ್ದಾರೆ. ಅಲ್ಲದೇ ರಾಜ್ಯದ ಜನಸಂಖ್ಯೆಯ 48% ಕ್ಕಿಂತ ಹೆಚ್ಚು ಹೊಂದಿರುವ ಇತರ ಹಿಂದುಳಿದ ವರ್ಗಗಳ (ಒಬಿಸಿ) ಸಮುದಾಯ ಪ್ರತಿನಿಧಿಸುತ್ತಿದ್ದಾರೆ.
Winter Health: ಚಳಿಗಾಲದಲ್ಲಿ ವಸಡು ಮತ್ತು ಹಲ್ಲುಗಳ ಆರೈಕೆ ಹೇಗೆ ಗೊತ್ತಾ: ಇಲ್ಲಿದೆ ಟಿಪ್ಸ್!
ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi), ಗೃಹ ಸಚಿವ ಅಮಿತ್ ಶಾ (Amit Shah) ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ (JP Nadda) ಸೇರಿದಂತೆ ಕೇಂದ್ರ ಸಚಿವರು ಎನ್ಡಿಎ (NDA) ಆಡಳಿತ ನಾಯಕರು ಭಾಗಿಯಾಗಿದ್ದರು. ಪ್ರಮಾಣ ವಚನ ಸಮಾರಂಭಕ್ಕೆ ತೆರಳುವ ಮುನ್ನ ಮೋಹನ್ ಯಾದವ್ ಭೋಪಾಲ್ನ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಬಳಿಕ ಬಿಜೆಪಿ ರಾಜ್ಯ ಕಚೇರಿಗೆ ತೆರಳಿ ಜನಸಂಘದ ಸಂಸ್ಥಾಪಕ ಸದಸ್ಯರಲ್ಲಿ ಒಬ್ಬರಾದ ಪಂಡಿತ್ ದೀನದಯಾಳ್ ಉಪಾಧ್ಯಾಯ ಮತ್ತು ಬಿಜೆಪಿಯ ಸಂಸ್ಥಾಪಕ ವಿಚಾರವಾದಿ ಶ್ಯಾಮ ಪ್ರಸಾದ್ ಮುಖರ್ಜಿ ಅವರಿಗೆ ಗೌರವ ಸಲ್ಲಿಸಿದರು.