ಮದ್ದೂರು:– ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವಿಗೆ ಮೋದಿ ಕೊಟ್ಟ ಹಣವೇ ಕಾರಣ ಎಂದು ಶಾಸಕ ಕೆ.ಎಂ.ಉದಯ್ ಆರೋಪ ಮಾಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ಘಡ ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಲು ಪ್ರಧಾನಿ ಮೋದಿ ಕೊಟ್ಟ ಹಣವೇ ಕಾರಣ ಎಂದು ಶಾಸಕ ಕೆ.ಎಂ.ಉದಯ್ ಆರೋಪಿಸಿದರು.
ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲ್ಲಲು ಕೈ ದುಡ್ಡು ಕಾರಣ ಎನ್ನುವುದು ಕುಮಾರಸ್ವಾಮಿ ಯಾವುದೇ ದಾಖಲೆ ನೀಡಿಲ್ಲ.
ನಾವೂ ಕೂಡ ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲ್ಲಲು ಮೋದಿ ಕಳುಹಿಸಿದ ದುಡ್ಡು ಕಾರಣ ಎಂದು ಹೇಳುತ್ತೇವೆಂದು ದೂಷಿಸಿದರು. ಕರ್ನಾಟಕದಲ್ಲಿ ಜನಪರ ಯೋಜನೆಯನ್ನು ಹತ್ತಿರದಿಂದ ಗಮನಿಸಿದ ತೆಲಂಗಾಣ ಮತದಾರರು ನಮ್ಮ ರಾಜ್ಯದಲ್ಲೂ ಕಾಂಗ್ರೆಸ್ ಬಡವರ ಪರವಾಗಿ ಆಡಳಿತ ನಡೆಸುತ್ತದೆ ಎನ್ನುವುದನ್ನು ಅರಿತ ಆ ರಾಜ್ಯದ ಮತದಾರರು, ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮದ್ದೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿರುವ ಅಲ್ಪಸಂಖ್ಯಾತರಿಂದ ಪಕ್ಷದ ಬಲವರ್ಧನೆಗೆ ಇನ್ನಷ್ಟು ಶಕ್ತಿ ಬಂದಿದೆ. ಮುಂದಿನ ಲೋಕಸಭಾ ಚುನಾವಣಎ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲೂ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ ಎಂದರು.