ಕೋಲಾರ:- ಲೋಕಸಭಾ ಚುನಾವಣೆ ಹಿನ್ನೆಲೆ ಹದ್ದಿನ ಕಣ್ಣಿಟ್ಟಿರುವ ಚುನಾವಣಾ ಅಧಿಕಾರಿಗಳು, ಕೋಲಾರ ಸೇರಿದಂತೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ, ವಾಹನ, ಸೀರೆಗಳನ್ನು ಜಪ್ತಿ ಮಾಡಲಾಗಿದೆ.
ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಸೋಮಯಾಜಲಹಳ್ಳಿ ಚೆಕ್ಪೋಸ್ಟ್ ಬಳಿ ಚಿಂತಾಮಣಿಯಿಂದ ಆಂಧ್ರಕ್ಕೆ ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ 1.90 ಲಕ್ಷ ರೂಪಾಯಿ ಮತ್ತು ಕಾರನ್ನು ವಶಕ್ಕೆ ಪಡೆಯಲಾಗಿದೆ. ಚಿಂತಾಮಣಿ ಮೂಲದ ಕೃಷ್ಣಪ್ಪಗೆ ಸೇರಿದ ಹಣ, ಕಾರು ಜಪ್ತಿ ಮಾಡಲಾಗಿದೆ. ಆಂಧ್ರಪ್ರದೇಶದಲ್ಲಿ ಲೋಕಸಭಾ, ವಿಧಾನಸಭಾ ಚುನಾವಣೆ ಹಿನ್ನೆಲೆ ಅಂತಾರಾಜ್ಯ ಗಡಿ ಭಾಗದ ಚೆಕ್ಪೋಸ್ಟ್ನಲ್ಲಿ ಇನ್ಸ್ಪೆಕ್ಟರ್ ಗೊರವಿನಕೊಳ್ಳ ನೇತೃತ್ವದಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ.