ಬೆಂಗಳೂರು:- ಬೆಂಗಳೂರಿನಲ್ಲಿ ಮಂಕಿಪಾಕ್ಸ್ ಕಟ್ಟೆಚ್ಚರ ವಹಿಸಲಾಗಿದ್ದು, ಟೆಸ್ಟಿಂಗ್, ಸ್ಕ್ರೀನಿಂಗ್, ಟ್ರ್ಯಾಕಿಂಗ್ ಶುರುವಾಗಿದೆ.
ಮಂಕಿಪಾಕ್ಸ್ ಮತ್ತೆ ಬಾಲ ಬಿಚ್ಚಿದೆ. 116 ದೇಶಗಳಲ್ಲಿ 537 ಕ್ಕೂ ಅಧಿಕ ಮಂದಿಯನ್ನು ಬಲಿಪಡೆದಿದೆ. ಮಂಕಿಪಾಕ್ಸ್ ಬಗ್ಗೆ ನಿರ್ಲಕ್ಷ್ಯ ಬೇಡ ಎಂದಿರುವ ಕೇಂದ್ರ ಆರೋಗ್ಯ ಇಲಾಖೆ ,ಕಟ್ಟೆಚ್ಚರ ವಹಿಸುವಂತೆ ರಾಜ್ಯಗಳಿಗೆ ಸೂಚಿಸಿದೆ.
ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ ವಹಿಸಲು ಆರೋಗ್ಯ ಇಲಾಖೆ ಸೂಚಿಸಿದೆ. ಪಾಸಿಟಿವ್ ಕಂಡುಬಂದ ದೇಶದಿಂದ ಬರುವ ಪ್ರಯಾಣಿಕರನ್ನು ಟೆಸ್ಟಿಂಗ್ಗೆ ಒಳಪಡಿಸಲು ತಿಳಿಸಿದೆ. ಮಂಕಿಪಾಕ್ಸ್ ಗುಣಲಕ್ಷಣಗಳು ಇದ್ದರೆ ಐಸೊಲೇಷನ್ನಲ್ಲಿ ಇಡಲು ತಿಳಿಸಲಾಗಿದೆ. ಶಂಕಿತರ ಚಿಕಿತ್ಸೆಗೆಗಾಗಿ ಇಂದಿರಾನಗರದ ಸಾಂಕ್ರಾಮಿಕ ರೋಗಗಳ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ ಸ್ಥಾಪಿಸಲಾಗಿದೆ.
ಮಹಿಳಾ ಹಾಗೂ ಪುರುಷರಿಗೆ ಪ್ರತ್ಯೇಕ 20 ಬೆಡ್ ಮೀಸಲಿಡಲಾಗಿದೆ. ವಿಮಾನ ನಿಲ್ದಾಣದಲ್ಲಿ ಶಂಕಿತರು ಹಾಗೂ ಸೋಂಕಿತರು ಕಂಡು ಬಂದರೆ ನೇರವಾಗಿ ಈ ಆಸ್ಪತ್ರೆಗೆ ಕರೆತಂದು ಚಿಕಿತ್ಸೆಗೆ ಸಿದ್ಧತೆ ನಡೆಸಲಾಗಿದೆ.
ಮಂಕಿಪಾಕ್ಸ್ ಶಂಕಿತರು ಕಂಡುಬಂದ್ರೆ ಅಂತಹವರ ಮಾದರಿಯನ್ನು ಬಿಎಂಸಿ ಲ್ಯಾಬ್ಗೆ ಕಳಿಸಲು ಸೂಚಿಸಲಾಗಿದೆ. ಮಂಕಿಪಾಕ್ಸ್ ಕಂಡುಬಂದರೆ ಈ ಆಸ್ಪತ್ರೆಯಲ್ಲಿ 21 ದಿನಗಳ ಕ್ವಾರಂಟೈನ್ ಮಾಡಲು ಇಲಾಖೆ ಮುಂದಾಗಿದೆ