ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶಂಕಿತ ಮಂಕಿಪಾಕ್ಸ್ ಪ್ರಕರಣ ನಿನ್ನೆ ತಡರಾತ್ರಿ ವರದಿಯಾಗಿದ್ದು, ಸಿಟಿ ಮಂದಿ ಗಾಬರಿ ಆಗಿದ್ದಾರೆ.
ಸಮಾಜದ ಸ್ವಾಸ್ಥ್ಯದ ಜೊತೆಗೆ ಶಿಕ್ಷಣ ಆರೋಗ್ಯಕ್ಕೆ ಅಧ್ಯತೆ: ಮಹಿಮಾ ಜೆ ಪಾಟೀಲ್!
40 ವರ್ಷದ ವ್ಯಕ್ತಿ ಸೋಂಕಿತರಾಗಿದ್ದು, ಸದ್ಯ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ವರ್ಷ ಕೆಲವು ಆಫ್ರಿಕನ್ ದೇಶಗಳಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಹೆಚ್ಚಾಗಿದ್ದವು. ನಂತರ ಪಾಕಿಸ್ತಾನ ಮತ್ತು ಥಾಯ್ಲೆಂಡ್ ಸೇರಿದಂತೆ ಇತರ ದೇಶಗಳಲ್ಲಿ ಪ್ರಕರಣಗಳು ವರದಿಯಾಗಲು ಪ್ರಾರಂಭಿಸಿದಾಗ ಮಂಕಿಪಾಕ್ಸ್ ಬಗ್ಗೆ ಜಾಗತಿಕ ಮಟ್ಟದಲ್ಲಿ ವ್ಯಾಪಕ ಆತಂಕ ಸೃಷ್ಟಿಯಾಗಿತ್ತು. ವಿಶ್ವ ಆರೋಗ್ಯ ಸಂಸ್ಥೆಯು ಮಂಕಿಪಾಕ್ಸ್ ಅನ್ನು 2024 ರ ಆಗಸ್ಟ್ನಲ್ಲಿ ‘ಅಂತರಾಷ್ಟ್ರೀಯ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ’ ಎಂದು ಘೋಷಿಸಿತ್ತು.
ಭಾರತದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣವು 2024 ರ ಸೆಪ್ಟೆಂಬರ್ನಲ್ಲಿ ವರದಿಯಾಗಿದೆ. ಕಳೆದ ತಿಂಗಳು, ಕೇರಳದಲ್ಲಿ ಎರಡು ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿದ್ದವು.
ಬೆಂಗಳೂರಿನಲ್ಲಿ ಶಂಕಿತ ಮಂಕಿಪಾಕ್ಸ್ ಪ್ರಕರಣ ಬುಧವಾರ ತಡರಾತ್ರಿ ವರದಿಯಾಗಿದೆ. ಒಂದು ವೇಳೆ ಇದು ದೃಢಪಟ್ಟಲ್ಲಿ 2025ರಲ್ಲಿ ಕರ್ನಾಟಕದಲ್ಲಿ ಪತ್ತೆಯಾದ ಮೊದಲ ಮಂಕಿಪಾಕ್ಸ್ ಪ್ರಕರಣ ಇದಾಗಿರಲಿದೆ. ದುಬೈಗೆ ಪ್ರಯಾಣಿಸಿದ ಹಿನ್ನೆಲೆಯುಳ್ಳ 40 ವರ್ಷದ ವ್ಯಕ್ತಿ ಸೋಂಕಿತರಾಗಿದ್ದು, ಸದ್ಯ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.