ಕೊಪ್ಪಳ:- ಜಿಲ್ಲೆಯ ಗಂಗಾವತಿ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ಮಧ್ಯಾಹ್ನ ಬಿಸಿಯೂಟ ಸೇವಿಸಿ 15ಕ್ಕೂ ಹೆಚ್ಚು ಮಕ್ಕಳು ತೀವ್ರ ಅಸ್ವಸ್ಥಗೊಂಡ ಘಟನೆ ಜರುಗಿದೆ.
ಸಂಗಾಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಅಸ್ವಸ್ಥರಾಗಿದ್ದರು. ಮಧ್ಯಾಹ್ನ ಊಟಕ್ಕೆ ಚಿತ್ರಾನ್ನ ಸೇವಿಸಿದ ನಂತರ ಕೆಲಹೊತ್ತಿನಲ್ಲಿ ವಾಂತಿ ಭೇದಿಯಿಂದ ವಿದ್ಯಾರ್ಥಿಗಳು ಬಳಲಿದ್ದಾರೆ. ಕೂಡಲೇ ಅಸ್ವಸ್ಥ ಮಕ್ಕಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಪಿಹೆಚ್ಸಿಗೆ ಡಿಹೆಚ್ಒ ಡಾ.ಲಿಂಗರಾಜ್ ಭೇಟಿ ನೀಡಿ ಆರೋಗ್ಯ ವಿಚಾರಣೆ ಮಾಡಿದ್ದಾರೆ. ಸುದ್ದಿ ತಿಳಿದು ಪ್ರಾಥಮಿಕ ಆರೋಗ್ಯ ಪೋಷಕರು ಕೇಂದ್ರಕ್ಕೆ ಆಗಮಿಸಿದ್ದಾರೆ.