ಶಿವಮೊಗ್ಗ: ಮಳೆ ಕೊರತೆಯಾಗಿ ಬೆಳೆ ಹಾನಿ ಆಗಿರುವುದಕ್ಕೆ ಎನ್ಡಿಆರ್ಎಫ್ ನಿಯಮದಂತೆ ಕೇಂದ್ರ ಸರಕಾರ ಪರಿಹಾರ ನೀಡುತ್ತಿದೆ. ಅದಕ್ಕೆ ರಾಜ್ಯದ ಪಾಲು ನೀಡುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ. ಕೇಂದ್ರದ ವಿರುದ್ಧ ಸಿಎಂ ಮಾಡುತ್ತಿರುವ ಆರೋಪ ನಿರಾಧಾರ ಎಂದು ಸಂಸದ ಬಿ. ವೈ. ರಾಘವೇಂದ್ರ ಹೇಳಿದರು. ಶಿಕಾರಿಪುರ ಪಟ್ಟಣದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಬಿ. ವೈ. ರಾಘವೇಂದ್ರ, ಸಿಎಂ ಸಿದ್ದರಾಮಯ್ಯ ಸಾರಥ್ಯದ ರಾಜ್ಯ ಸರ್ಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು.
ಕೇಂದ್ರದಲ್ಲಿ ಯುಪಿಎ ಸರ್ಕಾರ ಇದ್ದಾಗ ಎಷ್ಟು ಅನುದಾನ ನೀಡಲಾಗಿತ್ತು. ಎನ್ಡಿಎ ಸರ್ಕಾರ ಎಷ್ಟು ಅನುದಾನ ನೀಡಿದೆ ಎಂದು ವಿವರಿಸಿದ ಬಿ. ವೈ. ರಾಘವೇಂದ್ರ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಎಷ್ಟು ಹಣ ರೈತರಿಗೆ ತಲುಪಿತ್ತು ಹಾಗೂ ಈಗಿನ ಕಾಂಗ್ರೆಸ್ ಸರ್ಕಾರ ಎಷ್ಟು ಅನುದಾನ ನೀಡ್ತಿದೆ ಎಂದು ಅಂಕಿ ಅಂಶ ಸಮೇತ ವಿವರಿಸಿದ್ದಾರೆ.
ಮಂಡಿ ನೋವು, ಸಂದಿ ನೋವುಗಳಿಂದ ಜೀವನದಲ್ಲಿ ಬೇಸತ್ತಿದ್ದರೆ ಇದೊಂದು ಚಿಕಿತ್ಸೆ ಪ್ರಯತ್ನ ಮಾಡಿ: ಉಚಿತ ಸಲಹೆ
ಶಿವಮೊಗ್ಗ ಜಿಲ್ಲೆಯಲ್ಲಿ ಬರದಿಂದ ಅಂದಾಜು 80 ಸಾವಿರ ಹೆಕ್ಟೆರ್ ಬೆಳೆ ಹಾನಿ ಆಗಿದ್ದು ಎನ್ಡಿಆರ್ಎಫ್ ನಿಯಮದಂತೆ 80 ಕೋಟಿ ರೂ. ಬರಬೇಕಿದೆ. ಅದು ಬಿಡುಗಡೆ ಆಗುತ್ತದೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು. ಕಳೆದ ತಿಂಗಳು ರಾಜ್ಯ ಸರಕಾರ ದಿನಕ್ಕೆ 7 ಗಂಟೆ ವಿದ್ಯುತ್ ನೀಡಿದ್ದರೆ ರೈತರು ತಮ್ಮ ಬೆಳೆಯನ್ನಾದರೂ ಉಳಿಸಿಕೊಳ್ಳುತ್ತಿದ್ದರು. ಬೆಳೆ ಹಾನಿ ಕಾರಣಕ್ಕೆ ರಾಜ್ಯದಲ್ಲಿ 22ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೊದಲೆ ವಿದ್ಯುತ್ ನೀಡಿದ್ದರೆ ಆತ್ಮಹತ್ಯೆ ತಪ್ಪಿಸಬಹುದಾಗಿತ್ತು ಎಂದು ಹೇಳಿದರು.