ಹುಬ್ಬಳ್ಳಿ: ಕರ್ನಾಟಕದಲ್ಲಿ ಬಾಣಂತಿಯರ ಸಾವು ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ 8 ತಿಂಗಳ ಗರ್ಭಿಣಿ ಸಾವನ್ನಪ್ಪಿದ್ದಾರೆ. ರಾಧಿಕಾ ಗಡ್ಡಿಹೊಳಿ (19) ಮೃಥ ದುರ್ಧೈವಿಯಾಗಿದ್ದು, ಸಕಾಲಿಕ ಚಿಕಿತ್ಸೆ ದೊರೆಯದಿರುವುದು ಸಾವಿಗೆ ಕಾರಣ ಎನ್ನಲಾಗಿದೆ.
ಈ ದುರ್ಘಟನೆಯಿಂದ ತೀವ್ರ ಮನನೊಂದ ಪತಿ ಮಲ್ಲೇಶ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ರಾಧಿಕಾ ಮಲ್ಲೇಶ ಗಡ್ಡಿಹೊಳಿ ಬೆಳಗಾವಿ ಗೋಕಾಕ ತಾಲೂಕಿನ ಮೇಲಮಟ್ಟಿ ಗ್ರಾಮದವರು.
SSLC, ITI, ಡಿಗ್ರಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿದೆ ಬಂಪರ್ ಉದ್ಯೋಗಾವಕಾಶ! ಈಗಲೇ ಅರ್ಜಿ ಹಾಕಿ – ಕೈ ತುಂಬಾ ಸಂಬಳ
ಎಂಟೂವರೆ ತಿಂಗಳ ಗರ್ಭಿಣಿ ಆಗಿದ್ದ ರಾಧಿಕಾಗೆ 6 ಬಾರಿ ಫಿಟ್ಸ್ ಬಂದಿತ್ತು. ಮೊನ್ನೆ ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಫಿಟ್ಸ್ ಬಂದು ಸೀರಿಯಸ್ ಆಗಿದ್ದರು. 2 ಆಸ್ಪತ್ರೆಗೆ ಅಲೆದರೂ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿರಲಿಲ್ಲ. ಕೊನೆಗೆ ಬೆಳಗಾವಿಯ ಬಿಮ್ಸ್ಗೆ ಕರೆದುಕೊಂಡು ಬರುವಷ್ಟರಲ್ಲಿ ಶಿಶು ಗರ್ಭಿಣಿಯ ಹೊಟ್ಟೆಯಲ್ಲೇ ಮೃತಪಟ್ಟಿತ್ತು.
ರಾಧಿಕಾ ಸ್ಥಿತಿಯೂ ಗಂಭೀರವಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗರ್ಭಿಣಿ ಹಾಗೂ ನವಜಾತ ಶಿಶು ಪ್ರಾಣ ಬಿಟ್ಟಿದೆ. ರಾಧಿಕಾ ಅವರ ದುರಂತ ಅಂತ್ಯದ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. ಸದ್ಯ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.