ಬೆಂಗಳೂರು: ವಿದ್ಯತ್ ತಂತಿ ತುಳಿದು ತಾಯಿ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಕಾರಣ ಇಲಿ ವೈರ್ಗಳನ್ನು ಕಚ್ಚಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ ಎಂದು ಸಚಿವ ಕೆ ಜೆ ಜಾರ್ಜ್ ಹೇಳಿರುವುದಕ್ಕೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಕಿಡಿಕಾರಿದ್ದಾರೆ.
Breaking News: ಹಿರಿಯ ನಟಿ ಲೀಲಾವತಿ ತೋಟದ ಗೇಟ್ ಬಳಿ ಚಿರತೆ ಪ್ರತ್ಯಕ್ಷ
ಈ ಕುರಿತು ಇಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ವೈರ್ಗಳಿಗೆ ಇಲಿ ಕಚ್ಚಿ ಘಟನೆ ಸಂಭವಿಸಿದೆ ಎಂಬ ನೆಪ ಹೇಳಿಕೊಂಡು ತಿಪ್ಪೆ ಸಾರಿಸುವ ಮಟ್ಟಕ್ಕೆ ಸಚಿವರು ಇಳಿದಿರುವುದು ನೀಚತನದ ಪರಮಾವಧಿ ವ್ಯವಸ್ಥೆಯ ಸಮರ್ಪಕ ನಿರ್ವಹಣೆ ಕೊರತೆಯೇ ದುರಂತಕ್ಕೆ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.
ಆದರೂ, ಹೊಣೆಗಾರಿಕೆಯಿಂದ ನುಣುಚಿಕೊಂಡು ಸಂವೇದನಾ ರಹಿತರಾಗಿ ಸಚಿವ ಜಾರ್ಜ್ ವರ್ತಿಸುತ್ತಿರುವುದು ಸರ್ಕಾರಕ್ಕೆ ಶೋಭೆ ತರುವುದಿಲ್ಲ ಎಂದರು.
ಸಚಿವ ಕೆ ಜೆ ಜಾರ್ಜ್ ರಾಜೀನಾಮೆ ನೀಡಬೇಕು
ನಗರದಲ್ಲಿ ಇತ್ತೀಚೆಗೆ ವಿದ್ಯುತ್ ಅವಘಡದಲ್ಲಿ ತಾಯಿ, ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಬೂಬುಗಳನ್ನು ಹೇಳುವುದನ್ನು ಬಿಟ್ಟು ನೈತಿಕ ಹೊಣೆ ಹೊತ್ತು ಇಂಧನ ಸಚಿವ ಕೆ ಜೆ ಜಾರ್ಜ್ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ.