ವಿಜಯಪುರ:- ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಹರನಾಳ ಬಳಿ ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ತಾಯಿ ಮತ್ತು ಗಂಡು ಮಕ್ಕಳಿಬ್ಬರು ಸಾವನ್ನಪ್ಪಿರುವಂತಹ ಘಟನೆ ಜರುಗಿದೆ.
ಆಕಸ್ಮಿಕ ಅಗ್ನಿ ಅವಘಡ: ಬೆಂಗಳೂರಿನಲ್ಲಿ ಹೊತ್ತಿ ಉರಿದ ಸ್ಕ್ರಾಪ್ ಗೋಡೌನ್!
ನೀರು ಪಾಲಾದವರನ್ನು ಗೀತಾ ಬಡಗಿ, ಮಕ್ಕಳಾದ ಶ್ರವಣ್, ಶರಣ್ ಎಂದು ಗುರುತಿಸಲಾಗಿದೆ. ಮೃತ ಗೀತಾ ತಂದೆ ರಾಮಪ್ಪ ನಾಯ್ಕೋಡಿಗೆ ಸೇರಿದ ಜಮೀನಿನಲ್ಲಿ ಘಟನೆ ನಡೆದಿದೆ.
ಶ್ರೀಶೈಲ ಜೊತೆಗೆ ಮದುವೆಯಾಗಿದ್ದ ಗೀತಾ, ಗಂಡನ ಜೊತೆ ಜಗಳವಾಡಿ ತವರು ಮನೆಗೆ ಬಂದಿದ್ದರು. ಈ ವೇಳೆ ಮಕ್ಕಳ ಜತೆ ಕೃಷಿ ಹೊಂಡದ ಬಳಿ ಹೋಗಿದ್ದಾಗ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾರೆ. ಸದ್ಯ ತಾಯಿ ಮತ್ತು ಗಂಡು ಮಕ್ಕಳಿಬ್ಬರ ಶವಗಳನ್ನು ಸ್ಥಳೀಯರು ಹೊರ ತೆಗೆದಿದ್ದಾರೆ.