ಬೆಂಗಳೂರಿನಲ್ಲಿ (Bengaluru) ವಿದ್ಯುತ್ ತಗುಲಿ ತಾಯಿ, ಮಗು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (National Human Rights Commission) ನೋಟಿಸ್ (Notice) ಜಾರಿ ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಸ್ತೃತ ವರದಿಯನ್ನು ಆರು ವಾರಗಳಲ್ಲಿ ಸಲ್ಲಿಸುವಂತೆ ನೋಟಿಸ್ನಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ನಡೆದ ಘಟನೆ ಮಾನವ ಹಕ್ಕುಗಳ ಉಲ್ಲಂಘನೆಯ ಗಂಭೀರ ಸಮಸ್ಯೆಯನ್ನು ತೋರಿಸುತ್ತದೆ ಎಂದು ಆಯೋಗವು ಗಮನಿಸಿದೆ. ಇದು ಕಳವಳಕಾರಿ ವಿಷಯವಾಗಿದೆ. ವರದಿಯಾಗಿರುವ ಘಟನೆಯು ಬೆಂಗಳೂರಿನ ವಿದ್ಯುತ್ ಇಲಾಖೆಯ ನಿರ್ಲಕ್ಷ್ಯವನ್ನು ಸೂಚಿಸುತ್ತದೆ. ಈ ವಿಷಯದ ಬಗ್ಗೆ ವಿವರವಾದ ವರದಿಯನ್ನು ನೀಡಬೇಕು ಎಂದು ಕರ್ನಾಟಕದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ನೋಟಿಸ್ನಲ್ಲಿ ತಿಳಿಸಿದೆ.
ವರದಿಯು ಎಫ್ಐಆರ್ನ ಸ್ಥಿತಿ, ಲೋಪಗಳಿಗೆ ಕಾರಣರಾದ ಅಧಿಕಾರಿಗಳ ವಿರುದ್ಧ ತೆಗೆದುಕೊಂಡ ಕ್ರಮ ಮತ್ತು ಮೃತರ ಮುಂದಿನ ಸಂಬಂಧಿಕರಿಗೆ ನೀಡಲಾದ ಪರಿಹಾರವನ್ನು ಒಳಗೊಂಡ ಮಾಹಿತಿಯೂ ಸೇರಿ ವಿಸ್ತೃತ ವರದಿಯನ್ನು ನೀಡಬೇಕು ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಹೇಳಿದೆ.