ತುಮಕೂರು: ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರಿನಲ್ಲಿ ನಡೆದಿದೆ. 11 ತಿಂಗಳ ಮಗು, 4 ವರ್ಷದ ಪುತ್ರಿ ಜೊತೆ ವಿಜಯಲಕ್ಷ್ಮೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದ ಒಂದು ವರ್ಷದ ಹಿಂದೆ ವಿಜಯಲಕ್ಷ್ಮೀ ಪತಿ ಮೃತಪಟ್ಟಿದ್ದರು. ಮಕ್ಕಳ ಜೊತೆ ತಾಯಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.