ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮತ್ತಿಕೈ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಹೌದು ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಂಪಾಕಪುರ ನಿವಾಸಿ ವಾಣಿ (32) ಮತ್ತು ಮಕ್ಕಳಾದ ಸಮರ್ಥ (12), ಸಂಪದ (6) ಮೃತರು.
ಖಾಲಿ ಹೊಟ್ಟೆಯಲ್ಲಿ ಹಸಿ ಬೆಳ್ಳುಳ್ಳಿ ತಿನ್ನುವುದರಿಂದ ಸಿಗುವ ಪ್ರಯೋಜನಗಳೇನು ಗೊತ್ತಾ..?
ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ನಗರ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲು ರವಾನೆ ಮಾಡಲಾಗಿದ್ದು, ಇನ್ನೂ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.