ಬೆಳಗಾವಿ: ಬಳ್ಳಾರಿ ಹಾಗೂ ಬೆಳಗಾವಿಯಲ್ಲಿ ಬಾಣಂತಿಯರ ಹಾಗೂ ಶಿಶುಗಳ ಸಾವು ಪ್ರಕರಣ ಸರ್ಕಾರದ ವಿರುದ್ಧ ಆಕ್ರೋಶಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಇದೀಗ ಮತ್ತೆ ಜಿಲ್ಲಾಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಬಾಣಂತಿಯೊಬ್ಬರು ಸಾವನ್ನಪ್ಪಿದ್ದು. ಹುಕ್ಕೇರಿ ತಾಲೂಕಿನ ಗೌಡವಾಡ ಗ್ರಾಮದ ವೈಶಾಲಿ ಕೊಡಬಾಗಿ ಅವರು ಹೆರಿಗೆಗಾಗಿ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ನೆನ್ನೆ ಬೆಳಿಗ್ಗೆ 9;30ಕ್ಕೆ ಸಿಸೇರಿಯನ್ ಮೂಲಕ ಹೆಣ್ಣು ಮಗುವಿಗೆ ಜನ್ಮ ನೀಡಿದ ವೈಶಾಲಿಗೆ ಬೆಳಗ್ಗೆ ಎದೆನೋವು ಕಾಣಿಸಿಕೊಂಡಿತ್ತು.
PM Kisan Mandhan: ರೈತರಿಗೆ ಈ ಯೋಜನೆ ಅಡಿಯಲ್ಲಿ ಸಿಗಲಿದೆ ತಿಂಗಳಿಗೆ 3,000 ರೂಪಾಯಿ..! ಈಗಲೇ ಅರ್ಜಿ ಸಲ್ಲಿಸಿ
ತಕ್ಷಣ ಬಾಣಂತಿ ವೈಶಾಲಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಿತ್ತಾದರೂ, ಚಿಕಿತ್ಸೆ ಫಲಿಸದೇ ಮರಣ ಹೊಂದಿದ್ದಾರೆ ಎಂದು ಆಸ್ಪತ್ರೆ ಸಿಬ್ಬಂದಿ ಹೇಳಿದ್ದಾರೆ. ಆದರೆ ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡಿಲ್ಲ ಎಂದು ವೈಶಾಲಿ ಪತಿ ಈರಣ್ಣ ಆರೋಪಿಸಿದ್ದಾರೆ. ಈ ಘಟನೆಯಿಂದ ಆಸ್ಪತ್ರೆಯಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು, ಸ್ಥಳಕ್ಕೆ ಎಪಿಎಂಸಿ ಪೊಲೀಸರು ಆಗಮಿಸಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಪತಿಯ ಜೊತೆ ವೈಶಾಲಿ ಸಂಭ್ರಮದಿಂದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದರು.