ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ (Darshan) ಅರೆಸ್ಟ್ ಆಗಿದ್ದಾರೆ. ದರ್ಶನ್ರನ್ನು ನೋಡಲು ತಾಯಿ ಮೀನಾ, ಪತ್ನಿ ಮತ್ತು ಮಗ ಜೈಲಿಗೆ ಭೇಟಿ ನೀಡಿದ್ದಾರೆ. ಈ ವೇಳೆ, ತಾಯಿಯನ್ನು ನೋಡಿ ದರ್ಶನ್ ಕಣ್ಣೀರಿಟ್ಟಿದ್ದಾರೆ
Darshan Arrest Case: ನಟ ದರ್ಶನ್ ನೋಡಲು ಹುಬ್ಬಳ್ಳಿಯಿಂದ ಓಡೋಡಿ ಬಂದ ಅಜ್ಜಿ!
ಇಂದು ಬೆಳಗ್ಗೆ ದರ್ಶನ್ ತಾಯಿ ಮೀನಾ, ತಮ್ಮ ದಿನಕರ್, ಪತ್ನಿ ವಿಜಯಲಕ್ಷ್ಮೀ ಹಾಗೂ ಪುತ್ರ ವಿನೀಶ್ ಭೇಟಿ ನೀಡಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಜೈಲಿಗೆ ಮಾಧ್ಯಮಗಳ ಕಣ್ಣು ತಪ್ಪಿಸಲು ಖಾಸಗಿ ವಾಹನದಲ್ಲಿ ಬಂದ ದರ್ಶನ್ ಕುಟುಂಬ ಜೈಲಿನ ಒಳಗೆ ಹೋಗಿ ಭೇಟಿ ಮಾಡಿದೆ. ಮಗನ ಸ್ಥಿತಿ ನೋಡ್ತಿದ್ದಂತೆ ತಾಯಿ ಮೀನಾ ತೂಗುದೀಪ್ ಭಾವುಕರಾಗಿದ್ದಾರೆ. ದರ್ಶನ್ಗೆ ಸಹೋದರ ದಿನಕರ್ ಧೈರ್ಯ ತುಂಬಿದ್ದಾರೆ. ಮುಂದಿನ ಕಾನೂನು ಹೋರಾಟಕ್ಕೆ ಕುಟುಂಬಸ್ಥರ ಜೊತೆ ಚರ್ಚಿಸಿದ್ದಾರೆ.
ಇದೀಗ ಖಾಸಗಿ ವಾಹನದಲ್ಲೇ ದರ್ಶನ್ ಕುಟುಂಬ ಭೇಟಿ ನೀಡಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ. ಬಂಧಿಖಾನೆ ಇಲಾಖೆ ಕಾನೂನನ್ನು ಗಾಳಿಗೆ ತೂರಿ ರಾಜಾತಿಥ್ಯ ನೀಡಿದೆ. ಸಾಮಾನ್ಯರು ಜೈಲಿಗೆ ಎಂಟ್ರಿ ಕೊಡಬೇಕಾದರೆ ಹತ್ತಾರು ರೂಲ್ಸ್ ಹೇಳುತ್ತಾರೆ. ಅದೇ ನಟ ದರ್ಶನ್ ಕುಟುಂಬಕ್ಕೆ ಮಾತ್ರ ಕಂಡಿಷನ್ ಇಲ್ಲವೆಂಬಂತಾಗಿದೆ ಎಂದು ಅನೇಕರು ದೂರಿದ್ದಾರೆ.
ಅಪ್ರಾಪ್ತ ಮಕ್ಕಳಿಗೆ ಬೈಕ್ ಕೊಡೋ ಪೋಷಕರು ನೋಡಲೇಬೇಕು: CCTV Video Viral