ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಅವಮಾನವೀಯ ಘಟನೆ ನಡೆದಿದೆ. ಮಹಿಳೆಯನ್ನು ಬೆತ್ತಲೆ ಮಾಡಿ ಕಂಬಕ್ಕೆ ಕಟ್ಟಿ ಥಳಿಸಿರುವ ಆರೋಪ ಕೇಳಿ ಬಂದಿದೆ. ಈ ಅವಮಾನೀವಿಯ ಕೃತ್ಯ ಬೆಳಗಾವಿ ತಾಲ್ಲೂಕಿನ ವಂಟಮೂರಿ ಗ್ರಾಮದ ಬಸವೇಶ್ವರ ಗಲ್ಲಿಯಲ್ಲಿ ನಡೆದಿದೆ.
ದುಂಡಪ್ಪ ಮತ್ತು ಪ್ರಿಯಾಂಕ ಎಂಬುವರು ಪರಸ್ಪರ ಪ್ರೀತಿ ಮಾಡುತರಿದ್ದರು. ಪ್ರೀತಿಸಿದ ಜೋಡಿ ನಿನ್ನೆ ರಾತ್ರಿ ಮನೆ ಬಿಟ್ಟು ಓಡಿ ಹೋಗಿದ್ದಾರೆ. ಇದರಿಂದ ರೊಚ್ಚಿಗೆದ್ದ ಯುವತಿಯ ಮನೆಯವರು ಯುವಕನ ತಾಯಿ ಕಮಲವ್ವ ನಾಯಕ್ (42)ಳನ್ನು ಬೆತ್ತಲೆ ಮಾಡಿ ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಯುವತಿ ಪ್ರಿಯಾಂಕಾಳ ಮದುವೆ ನಿಗಡಿಯಾಗಿತ್ತು.
ಇಂದು ನಿಶ್ಚಿತಾರ್ಥ ಕೂಡಾ ಇತ್ತು. ಆದರೆ ನಿನ್ನೆ ರಾತ್ರಿ ಪ್ರೇಮಿ ದುಂಡಪ್ಪ ಜೊತೆ ಓಡಿ ಹೋಗಿದ್ದಕ್ಕೆ ಯುವತಿ ಕುಟುಂಬಸ್ಥರು ಯುವಕನ ಮನೆ ಮೇಲೆ ದಾಳಿ ಮಾಡಿ ಮನೆಯನ್ನು ಸಂಪೂರ್ಣ ಧ್ವಂಸಗೊಳಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ತಡರಾತ್ರಿ ಸ್ಥಳಕ್ಕೆ ಕಾಕತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ 7 ಜನರನ್ನು ಬಂಧಿಸಿದ್ದಾರೆ. ಇನ್ನು ಗ್ರಾಮದಲ್ಲಿ 2 ಕೆ ಎಸ್ ಆರ್ ಪಿ ತುಕಡಿ ನಿಯೋಜನೆ ಮಾಡಲಾಗಿದ್ದು, ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಓಡಿ ಹೋಗಿರೊ ಪ್ರೇಮಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.