ಬೆಂಗಳೂರು:- ನಗರದ ವಾಹನ ಸವಾರರೇ ಇದು ನೀವು ನೋಡಲೇಬೇಕಾದ ಸ್ಟೋರಿ. ನಗರದ ಈ ರಸ್ತೆಗಳು 1 ತಿಂಗಳು ಬಂದ್ ಆಗಲಿದೆ.
Friday Lakshmi Puja: ಪ್ರತಿ ಶುಕ್ರವಾರ ನೀವು ಹೀಗೆ ಲಕ್ಷ್ಮೀ ಪೂಜೆ ಮಾಡಿದ್ರೆ ಶ್ರೀಮಂತರಾಗ್ತೀರಾ!
ಪೈಪ್ ಲೈನ್ ಕಾಮಗಾರಿ ಹಿನ್ನೆಲೆ ಸುಗಮ ಸಂಚಾರ ದೃಷ್ಟಿಯಿಂದ “ಬಿಜಿಎಸ್ ಜಂಕ್ಷನ್ ಕಡೆಯಿಂದ ಮಧು ಪೆಟ್ರೋಲ್ ಬಂಕ್ ಜಂಕ್ಷನ್” ವರೆಗಿನ ರಸ್ತೆಯಲ್ಲಿ ಇಂದಿನಿಂದ ಒಂದು ತಿಂಗಳ ಕಾಲ ಎಲ್ಲ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಈ ಬಗ್ಗೆ ಬೆಂಗಳೂರು ಸಂಚಾರಿ ಪೊಲೀಸರು ಮಾದ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಬಿಜಿಎಸ್ ಜಂಕ್ಷನ್ ಕಡೆಯಿಂದ ಮಧು ಪೆಟ್ರೋಲ್ ಬಂಕ್ ಜಂಕ್ಷನ್ ಕಡೆಗೆ ಸಂಚರಿಸುವ ವಾಹನಗಳು ಬಿಜಿಎಸ್ ಆಸ್ಪತ್ರೆ ಜಂಕ್ಷನ್ನಲ್ಲಿ ಬಲ ತಿರುವು ಪಡೆದು ಮೂಕಾಂಬಿಕ ಸರ್ಕಲ್, ವೃಷಭಾವತಿ ಮೋರಿ ಬ್ರಿಡ್ಜ್ ಮೂಲಕ ಮೈಸೂರು ರಸ್ತೆಗೆ ಪ್ರವೇಶಿಸಬಹುದು.
ಮೈಸೂರು ರಸ್ತೆಯಿಂದ ಉತ್ತರಹಳ್ಳಿಗೆ ಹೋಗುವ ವಾಹನಗಳು ಮೈಲಸಂದ್ರ ವಿಲೇಜ್ ಜಂಕ್ಷನ್ನಲ್ಲಿ ಬಲ ತಿರುವು ಪಡೆದು ವಿಲೇಜ್ ಬ್ಯಾಕ್ ಗೇಟ್ ರಸ್ತೆ ಹಾಗೂ ಬಿಜಿಎಸ್ ಜಂಕ್ಷನ್ ಮೂಲಕ ಉತ್ತರಹಳ್ಳಿಗೆ ತಲುಪಬಹುದಾಗಿರುತ್ತದೆ. ನಗರದ ಕಡೆಯಿಂದ ಉತ್ತರಹಳ್ಳಿಗೆ ಹೋಗುವ ವಾಹನಗಳು ಮೈಲಸಂದ್ರ ಜಂಕ್ಷನ್ನಲ್ಲಿ ಎಡ ತಿರುವು ಪಡೆದು ಬಿಜಿಎಸ್ ಜಂಕ್ಷನ್ ಮೂಲಕ ಸಾಗಬಹುದು ಎಂದು ಬೆಂಗಳೂರು ಸಂಚಾರಿ ಪೊಲೀಸ್ ತಿಳಿಸಿದೆ.