ಬೆಂಗಳೂರು: ನಗರದಲ್ಲಿ ಫುಟ್ಪಾತ್ ಮೇಲೆ ವಾಹನ ಚಲಾಯಿಸುವುದು ಕಾಮನ್ ಅನ್ನೋ ರೀತಿ ಆಗಿದೆ. ಜನರು ಸಿಗ್ನಲ್ ಸಮಸ್ಯೆಯಿಂದ ಪಾರಾಗಲು ಫುಟ್ಪಾತ್ ಮೇಲೂ ಬೈಕ್ ಹತ್ತಿಸಿಕೊಂಡು ಹೋಗುತ್ತಾರೆ. ಆದರೆ ಇನ್ಮುಂದೆ ಆ ರೀತಿ ಫುಟ್ಪಾತ್ ಮೇಲೆ ವಾಹನ ಚಲಾಯಿಸಿದರೆ ಪೊಲೀಸರು ದಂಡದ ಜೊತೆ ಪ್ರಕರಣವನ್ನು ದಾಖಲು ಮಾಡಿ ಕೋರ್ಟ್ಗೆ ಎಳೆಯುತ್ತಾರೆ. ಅಲ್ಲದೇ ಪ್ರಕರಣ ದಾಖಲಿಸಿ ಗಾಡಿಯನ್ನು ಸ್ಥಳದಲ್ಲೇ ಸೀಜ್ ಮಾಡ್ತಾರೆ.
ಅದಲ್ಲದೆ ದಂಡಾಸ್ತ್ರಕ್ಕೂ ಜಗ್ಗದ ವಾಹನ ಸವಾರರ ಡ್ರೈವಿಂಗ್ ಲೈಸೆನ್ಸ್ ಅಮಾನತು ಮಾಡಲು ತೀರ್ಮಾನಿಸಿದ್ದಾರೆ. ಪಾದಚಾರಿಗಳ ಸುರಕ್ಷತೆ ದೃಷ್ಠಿಯಿಂದ ಸಂಚಾರಿ ಪೊಲೀಸರು ಈ ನಿಯಮ ಜಾರಿಗೆ ತಂದಿದ್ದಾರೆ. ಈ ಹಿಂದೆ ಫುಟಪಾತ್ ಮೇಲೆ ಗಾಡಿ ಓಡಿಸಿದರೆ ಸಂಚಾರಿ ಪೊಲೀಸರು ದಂಡ ಹಾಕುತ್ತಿದ್ದರು. ದಂಡ ವಿಧಿಸಿದರೂ ವಾಹನ ಸವಾರರು ಮಾತ್ರ, ಜಗ್ಗದೆ ಮತ್ತೆ ತಮ್ಮ ಫುಟ್ಪಾತ್ ಮೇಲೆ ವಾಹನ ಚಲಾಯಿಸುತ್ತಿದ್ದಾರೆ.
Monday Remedy: ಸೋಮವಾರದಂದು ಈ 5 ಕೆಲಸಗಳನ್ನು ಮಾಡಿದರೆ ಶ್ರೀಮಂತರಾಗೋದು ಖಚಿತ..!
ಹೀಗಾಗಿ, ಬೆಂಗಳೂರು ಸಂಚಾರಿ ಪೊಲೀಸ್ ಹಿರಿಯ ಅಧಿಕಾರಿಗಳು ಸಭೆ ನಡೆಸಿ, ಡ್ರೈವಿಂಗ್ ಲೈಸೆನ್ಸ್ ಅಮಾನತು ಮಾಡುವ ನಿರ್ಧಾರ ಕೈಗೊಂಡಿದ್ದಾರೆ. ಮೊದಲ ಬಾರಿಗೆ ದಂಡ ಹಾಕಲಾಗುತ್ತದೆ. ಮತ್ತೆ ಮತ್ತೆ ಸಿಕ್ಕಿಬಿದ್ದರೇ, ಆತನ ಲೈಸೆನ್ಸ್ ಅಮಾನತು ಮಾಡುವಂತೆ ಸಂಚಾರಿ ಪೊಲೀಸರು ಶಿಪಾರಸ್ಸು ಮಾಡುತ್ತಾರೆ. ಹೀಗಾಗಿ, ಇನ್ಮುಂದೆ ಫುಟ್ಪಾತ್ ಮೇಲೆ ಗಾಡಿ ಓಡಿಸುವ ಮುನ್ನ ಯೋಚಿಸಿ ಎಂದು ಸಂಚಾರಿ ಪೊಲೀಸರಿ ಎಚ್ಚರಿಕೆ ನೀಡಿದ್ದಾರೆ.