ನವದೆಹಲಿ: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆಯಲು ಆರಂಭವಾಗಿದೆ.ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಮತ್ತೆ ಬಿಜೆಪಿ ಸೇರ್ಪಡೆಯಾಗಲು ನಿರ್ಧರಿಸಿದ್ದಾರೆ. ದೆಹಲಿಯಲ್ಲಿ ಇಂದು ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಬಿಜೆಪಿ ಸೇರ್ಪಡೆಯಾಗುವುದು ಖಚಿತವಾಗಿದೆ.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಜಗದೀಶ್ ಶೆಟ್ಟರ್ ಅವರು ದೆಹಲಿಯಲ್ಲಿನ ಅಮಿತ್ ಶಾ ನಿವಾಸದಲ್ಲಿ ಇಂದು ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ವೇಳೆ ಶೆಟ್ಟರ್ ಮನವೋಲಿಸುವಲ್ಲಿ ಅಮಿತ್ ಶಾ ಯಶಸ್ವಿಯಾಗಿದ್ದು, ಪಕ್ಷಕ್ಕೆ ಮರಳಲು ಶೆಟ್ಟರ್ ಒಪ್ಪಿಗೆ ಸೂಚಿಸಿದ್ದಾರೆ. ಬಿಜೆಪಿ ಸೇರ್ಪಡೆ ಬಗ್ಗೆ ಶೆಟ್ಟರ್ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ ಎಂದು ಬಿಜೆಪಿ ಉನ್ನತ ಮೂಲಗಳಿಂದ ತಿಳಿದುಬಂದಿದೆ.