ಚಾಮರಾಜನಗರ:- 2024 ರ ಲೋಕಸಭಾ ಚುನಾವಣೆ ಪ್ರಯುಕ್ತ ಕಾರ್ಯಪ್ರವೃತ್ತರಾದ ಚುನಾವಣಾ ಅಧಿಕಾರಿಗಳು, ದಾಖಲೆ ಇಲ್ಲದ ಒಂದು ಲಕ್ಷ ಹಣ ಸೀಜ್ ಮಾಡಿದ್ದಾರೆ.
ಕೊಳ್ಳೇಗಾಲದ ತಾಲೂಕಿನ ದಾಸನಪುರ ಚೆಕ್ ಪೋಸ್ಟ್ ನಲ್ಲಿ ಹಣ ವಶಕ್ಕೆ ಪಡೆಯಲಾಗಿದ್ದು, ಬೆಂಗಳೂರಿನ ಮೂಲದ ಪ್ರಮೋದ ಎಂಬುವವರ ಕಾರಿನಲ್ಲಿ ದಾಖಲೆ ಇಲ್ಲದ ಹಣ ಸೀಜ್ ಮಾಡಿದ್ದಾರೆ.
ಹಣದ ಮೂಲದ ಬಗ್ಗೆ ಸ್ಪಷ್ಟ ಉತ್ತರ ಸಿಗದ ಕಾರಣ ಹಣ ವಶಕ್ಕೆ ಪಡೆಯಲಾಗಿದೆ.
ಚೆಕ್ ಪೋಸ್್ಟ ನಲ್ಲಿ ತಪಾಸಣಾ ವೇಳೆ ಹಣ ಸಿಕ್ಕಿದ್ದು, ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.