ಬೆಂಗಳೂರು:- ಸಂಸತ್ ಹಣಕಾಸು ಸ್ಥಾಯಿ ಸಮಿತಿ ಸದಸ್ಯರಾಗಿ ಚಿಕ್ಕಬಳ್ಳಾಪುರ ಬಿಜೆಪಿ ಎಂಪಿ ಸುಧಾಕರ್ ನೇಮಕ ಆಗಿದ್ದಾರೆ. ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡುವ ಮೂಲಕ ಡಾ.ಕೆ.ಸುಧಾಕರ್ಗೆ ಅಭಿನಂದನೆ ತಿಳಿಸಿದೆ.
ಬಿಜೆಪಿಯ ಭರ್ತೃಹರಿ ಮಹತಾಬ್ ಅವರಿಗೆ ಹಣಕಾಸು ಸ್ಥಾಯಿ ಸಮಿತಿಯ ಮುಖ್ಯಸ್ಥ ಸ್ಥಾನ ನೀಡಲಾಗಿದ್ದು, ಶಶಿ ತರೂರ್ ಅವರಿಗೆ ವಿದೇಶಾಂಗ ವ್ಯವಹಾರಗಳ ಸಮಿತಿಯ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಇನ್ನು ಈ ಬಗ್ಗೆ ಸ್ವತಃ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದು, ಸಂಸತ್ತಿನ ಹಣಕಾಸು ಸ್ಥಾಯಿ ಸಮಿತಿಯ ಸದಸ್ಯನಾಗಿ ಆಯ್ಕೆಯಾಗಿರುವುದು ಅತ್ಯಂತ ಹೆಮ್ಮೆಯ ಮತ್ತು ಸಂತಸದ ವಿಷಯವಾಗಿದೆ ಎಂದು ಹೇಳಿದ್ದಾರೆ.
ಈ ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ, ಲೋಕಸಭಾಧ್ಯಕ್ಷರಾದ ಓಂ ಬಿರ್ಲಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಮತ್ತು ನಮ್ಮ ಪಕ್ಷ ಹಿರಿಯ ನಾಯಕರಾದ ಅಮಿತ್ ಶಾ ಹಾಗೂ ಬಿಎಲ್ ಸಂತೋಷ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
2025ರ ವೇಳೆಗೆ ಭಾರತವನ್ನ 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಮಾಡುವ ಪ್ರಧಾನಿ ಮೋದಿ ಅವರ ಮಹತ್ವಾಕಾಂಕ್ಷೆಯ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ ಸಂಸತ್ತಿನ ಹಣಕಾಸು ಸ್ಥಾಯಿ ಸಮಿತಿಯ ಸದಸ್ಯನಾಗಿ ನನ್ನದೇ ಆದ ಸಣ್ಣ ಅಳಿಲು ಸೇವೆ ಸಲ್ಲಿಸಲು ಉತ್ಸುಕನಾಗಿದ್ದೇನೆ ಎಂದು ಹೇಳಿದ್ದಾರೆ.