ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿನ ಬಿಜೆಪಿ-ಜೆಡಿಎಸ್ ಮೈತ್ರಿ ಹಿನ್ನೆಲೆಯಲ್ಲಿ ಇಂದು ಸಂಸದರಾದ ತೇಜಸ್ವಿ ಸೂರ್ಯ ಅವರು ಜೆಡಿಎಸ್ ಕಚೇರಿಗೆ ತೆರಳಿ ಅಲ್ಲಿನ ಕಾರ್ಯಕರ್ತರನ್ನ ಭೇಟಿಯಾಗಿದ್ದರು
ಜೆಪಿ ಭವನದಲ್ಲಿ ಜೆಡಿಎಸ್ ಪಕ್ಷದ ಕೇಂದ್ರ ಕಚೇರಿಗೆ ಭೇಟಿ ನೀಡಿದ್ದು ಈ ವೇಳೆ ಪರಿಷತ್ ಸದಸ್ಯರಾದ ಟಿ.ಎ.ಶರವಣ ಅವರು ತೇಜಸ್ವಿ ಸೂರ್ಯ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.
ಲೋಕಸಭಾ ಚುನಾವಣೆ ಬಗ್ಗೆ ಕೆಲಕಾಲ ಸಮಾಲೋಚನೆ ನಡೆಸಿದರು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಮರುಸ್ಪರ್ಧೆ ಮಾಡಲಿದ್ದು, ಜೆಡಿಎಸ್ ಎಲ್ಲಾ ರೀತಿಯ ಸಹಕಾರ ನೀಡುವಂತೆ ಕೋರಿದರು.
.ಎನ್ಡಿಎ ಮೈತ್ರಿಕೂಟವನ್ನು ಜೆಡಿಎಸ್ ಸೇರಿದ್ದು, ಬಿಜೆಪಿ ಅಭ್ಯರ್ಥಿಯಾಗಿರುವ ತೇಜಸ್ವಿ ಸೂರ್ಯ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಟಿ.ಎ.ಶರವಣ ಅವರು ತಿಳಿಸಿದರು.