ವಿಜಯಪುರ: ಯಾರು ಹೇಳಿಕೆಗಳ ಮೂಲಕ ಭಯೋತ್ಪಾದನೆ ಮಾಡಬಾರದು. ಹೆಳಿಕೆಗಳಿಂದ ಭಯ ಹುಟ್ಟಿಸುವವರು ಭಯೋತ್ಪಾದಕರು ಎಂದು ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ (B. K. Hariprasad) ವಿರುದ್ಧ ಪೇಜಾವರ ಶ್ರೀಗಳು (Pejavara shree) ಕಿಡಿಕಾರಿದ್ದಾರೆ. ನಗರದಲ್ಲಿ ( Vijayapura) ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಗೋಧ್ರಾ ಮಾದರಿಯ ಘಟನೆ ಮರುಕಳಿಸಬಹುದು ಎಂಬ ಬಿ.ಕೆ ಹರಿಪ್ರಸಾದ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.
H.D.Devegowda: ಸಿದ್ದರಾಮಯ್ಯ, ಡಿಕೆಶಿ ನಾಯಕತ್ವದಲ್ಲೇ ಕಾಂಗ್ರೆಸ್ ಅಂತ್ಯ: HDD ಭವಿಷ್ಯ!
ಈ ವೇಳೆ, ಯಾಕೆ ನೇರವಾಗಿ ಇಲಾಖೆಗಳಿಗೆ ಹೋಗಿ ಮಾಹಿತಿ ನೀಡುತ್ತಿಲ್ಲ? ಇವರು ಯಾರನ್ನು ರಕ್ಷಣೆ ಮಾಡುತ್ತಿದ್ದಾರೆ? ಕೇಳಿದ್ರೆ ಹೇಳುತ್ತೇವೆ ಎನ್ನುವುದು ವಿಧ್ವಂಸಕ ಕೃತ್ಯ ನಡೆಯಲಿ ಎಂದಂತೆ ಅಲ್ಲವೇ? ಇವರು ವಿಧ್ವಂಸಕ ಕೃತ್ಯ ನಡೆಸುವವರನ್ನ ರಕ್ಷಣೆ ಮಾಡ್ತಿದ್ದಾರಾ ಎಂದು ಪ್ರಶ್ನೆಗಳ ಮಳೆ ಸುರಿಸಿದ್ದಾರೆ. ಜವಾಬ್ದಾರಿ ಸ್ಥಾನದಲ್ಲಿ ಇರುವವರು ಈ ರೀತಿ ಮಾತನಾಡಬಾರದು. ಈಗ ಭಯ ಹುಟ್ಟಿದೆ, ಈಗ ಭಯೋತ್ಪಾದಕರು ಯಾರು? ಯಾರು ಹೇಳ್ತಿದ್ದಾರೋ ಅವರು ಸ್ವತಃ ಭಯೋತ್ಪಾದಕರು ಎಂದು ಆಕ್ರೋಶ ಹೊರಹಾಕಿದ್ದಾರೆ.