ಬೆಂಗಳೂರು:- ಸಿದ್ದರಾಮಯ್ಯ ರಾಜೀನಾಮೆ ಕೊಡೋ ಮುಂಚಿತವಾಗಿ ಮುಡಾ ಪ್ರಕರಣ ಸಿಬಿಐಗೆ ಹಸ್ತಾಂತರಿಸಲಿ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ.
Prahlad Joshi: ವಿಜಯೇಂದ್ರಗೆ ಬಚ್ಚಾ ಎಂದಿದ್ದು ತಪ್ಪು: ಪ್ರಹ್ಲಾದ್ ಜೋಶಿ!
ಈ ಸಂಬಂಧ ಮಾತನಾಡಿದ ಅವರು, ಮೈಸೂರು ಮುಡಾ ಹಗರಣ ಸಂಬಂಧ ಸಿಎಂ ಭಂಡತನ ಬಿಟ್ಟು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ರಾಜೀನಾಮೆ ಕೊಡುವ ಮುಂಚಿತವಾಗಿ ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ಹಸ್ತಾಂತರ ಮಾಡಬೇಕು ಎಂದರು.
ಮುಡಾ ಹಗರಣದ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಸ್ನೇಹಮಯಿ ಕೃಷ್ಣ ಅವರು ಬಯಲಿಗೆಳೆದಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷ ಇದರ ವಿರುದ್ಧ ಸದನದ ಒಳಗೆ ಹಾಗೂ ಹೊರಗೆ ಹೋರಾಟ ಮಾಡುತ್ತಾ ಬಂದಿದ್ದೇವೆ. ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿಗಳನ್ನು ತುದಿಗಾಲಲ್ಲಿ ನಿಲ್ಲಿಸಿದ್ದೇವೆ ಎಂದು ಹೇಳಿದ್ದಾರೆ.
ಹಗರಣದಿಂದ ಮುಡಾಕ್ಕೆ ಕೋಟಿಗಟ್ಟಲೆ ನಷ್ಟವಾಗಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಬಡವರಿಗೆ ಮಂಜೂರಾಗಬೇಕಿದ್ದ ನಿವೇಶನಗಳನ್ನು ರಿಯಲ್ ಎಸ್ಟೇಟ್ ಉದ್ಯಮಿಗಳು, ದಲ್ಲಾಳಿಗಳಿಗೆ ನೀಡಿದ್ದು ಸ್ಪಷ್ಟವಾಗಿದೆ. ಇದರಿಂದ ಸರ್ಕಾರ ಮತ್ತು ಮುಡಾಕ್ಕೆ ಸಾವಿರಾರು ಕೋಟಿ ನಷ್ಟವಾದುದು ಮತ್ತೊಮ್ಮೆ ಋಜುವಾತಾಗಿದೆ ಎಂದು ವಿಶ್ಲೇಷಿಸಿದರು.