ಮೈಸೂರು: ಮುಡಾ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದೂರು ದಾಖಲಾಗಿದೆ. ನಕಲಿ ದಾಖಲೆ ಸೃಷ್ಟಿ ಮೂಲಕ ಮುಡಾ ವಂಚಿಸಿ ಕೋಟ್ಯಂತರ ಬೆಲೆಯ ನಿವೇಶನ ಪಡೆದ ಆರೋಪ ಹೊರಿಸಲಾಗಿದೆ. ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ, ಭೂ ಮಾಲೀಕ ಎಂದು ಹೇಳುವ ದೇವರಾಜು ಹಾಗೂ ಕುಟುಂಬದವರ ವಿರುದ್ಧ ದೂರು ದಾಖಲಾಗಿದೆ.
ಇದೇ ಪ್ರಕರಣದಲ್ಲಿ ಜಿಲ್ಲಾಧಿಕಾರಿ, ತಹಸೀಲ್ದಾರ್, ಉಪ ನೋಂದಣಾಧಿಕಾರಿ ಹಾಗೂ ಮುಡಾ ಅಧಿಕಾರಿಗಳ ಶಾಮೀಲು ಬಗ್ಗೆಯು ದೂರು ಕೇಳಿಬಂದಿದೆ. ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬವರು ದೂರು ನೀಡಿದ್ದಾರೆ. ಪೊಲೀಸರ ಜೊತೆಗೆ ರಾಜ್ಯಪಾಲ, ರಾಜ್ಯ ಮುಖ್ಯಕಾರ್ಯದರ್ಶಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗೂ ಪತ್ರ ಬರೆದಿದ್ದಾರೆ. ಪತ್ರದ ಮೂಲಕ ಪ್ರಕರಣ ಸಂಬಂಧ ಹಲವು ಪ್ರಶ್ನೆ ಎತ್ತಿದ್ದಾರೆ.
ನಿಮ್ಮ ದೇಹದ ತೂಕವನ್ನು ಕಡಿಮೆ ಮಾಡಲು ಇಲ್ಲಿದೆ ನೋಡಿ ಸಿಂಪಲ್ ಟಿಪ್ಸ್..!
ಪ್ರಕರಣ ಸಂಬಂಧ ಹಲವಾರು ಅನುಮಾನಗಳು ವ್ಯಕ್ತಪಡಿಸಿದ್ದಾರೆ. ಪಾರ್ವತಿ ಪ್ರಕರಣದಲ್ಲಿ ಭೂ ಸ್ವಾಧೀನದಿಂದ ಕೈಬಿಟ್ಟಿರುವ ರಾಜ್ಯಪತ್ರದ ಬಗ್ಗೆಯೇ ಅನುಮಾನ ಇದೆ. ಮೂಲ ಭೂ ಮಾಲೀಕರ ಮಗ ಎನ್ನುವ ದೇವರಾಜು ಅಸ್ತಿತ್ವದ ಬಗ್ಗೆ ಪ್ರಶ್ನೆ ಎದ್ದಿದೆ.
1998ರಲ್ಲಿ ಭೂ ಸ್ವಾಧಿನದಿಂದ ಕೈ ಬಿಟ್ಟಿದ್ದು ನಿಜವಾದರೆ 2010ರ ವರೆಗಿನ ಆರ್ಟಿಸಿ ಗಳಲ್ಲಿ ಭೂ ಸ್ವಾಧೀನ ಎಂಬ ಉಲ್ಲೇಖ ಏಕಿದೆ? ದೇವರಾಜು ಮತ್ತು ನಂತರ ಮಲ್ಲಿಕಾರ್ಜುನಸ್ವಾಮಿ ಅವರ ಮಾಲೀಕತ್ವ ಮತ್ತು ಸ್ವಾಧೀನದಲ್ಲಿ ಈ ಜಮೀನು ಇದ್ದಿದ್ದರೆ ಪ್ರಾಧಿಕಾರದ ಅಭಿವೃದ್ಧಿ ಕೆಲಸವನ್ನ ಏಕೆ ತಡೆದಿಲ್ಲ. 5% ಮಲ್ಲಿಕಾರ್ಜುನ ಹಾಗೂ ಪಾರ್ವತಿ ಅವರ ಹೆಸರಿಗೆ ಖಾತೆ ವರ್ಗಾವಣೆ ಮಾಡುವ ವೇಳೆ ಸ್ಥಳ ಪರಿಶೀಲನೆ ಮಾಡಲಿಲ್ವ ಎಂದು ಪ್ರಶ್ನಿಸಿದ್ದಾರೆ.