ಬೆಂಗಳೂರು: ಸಿಎಂ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬಳಿಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಿಎಂ ಸಿದ್ದರಾಮಯ್ಯ ಮುಖಾಮುಖಿ ಭೇಟಿಯಾಗಿದ್ದಾರೆ.
ಸಿಎಂ ಸಿದ್ದರಾಮಯ್ಯ ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ರನ್ನು ಭೇಟಿ ನೀಡಿದ್ದಾರೆ. ಬೆಂಗಳೂರಿಗೆ ಮಾಲ್ಡೀವ್ಸ್ ಅಧ್ಯಕ್ಷರ ಭೇಟಿ ಹಿನ್ನೆಲೆಯಲ್ಲಿ ರಾಜಭವನದಲ್ಲಿ ಔತಣಕೂಟ ಆಯೋಜಿಸಲಾಗಿತ್ತು.
ಹೀಗಾಗಿ ರಾಜ್ಯಪಾಲರ ಆಹ್ವಾನ ಮೇರೆಗೆ ರಾಜಭವನಕ್ಕೆ ತೆರಳಿದ್ದ ಸಿದ್ದರಾಮಯ್ಯ ಈ ವೇಳೆ ಭೇಟಿ ಮಾಡಿ ನಗುಮುಖದಿಂದಲೇ ಕೈಕುಲುಕಿ ಕುಶಲೋಪರಿ ವಿಚಾರಿಸಿದ್ದಾರೆ.