ಮೈಸೂರು: ರಾಜ್ಯ ರಾಜಕಾರಣದಲ್ಲಿ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿದೆ. ಮುಡಾದ ಮಾಜಿ ಆಯುಕ್ತರನ್ನು ಅಮಾನತು ಮಾಡುವ ಮೂಲಕ ಹಿಂದಿನ ನಿರ್ಣಯಗಳು ಹಾಗೂ ನಿರ್ದೇಶನಗಳು ತಪ್ಪಾಗಿವೆ ಎಂಬುದನ್ನು ಸರ್ಕಾರವೇ ಒಪ್ಪಿಕೊಂಡಂತಾಗಿದೆ. ಇದು ಭಾರೀ ಸಂಚಲನಕ್ಕೆ ಕಾರಣವಾಗಿದೆ. ಇದರ ಮಧ್ಯ ಮುಡಾ ಅಧ್ಯಕ್ಷ ಅನಾರೋಗ್ಯದಿಂದ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದುಕೊಂಡು ಬಳಿಕ ಮತ್ತೆ ಮೈಸೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
Teachers Day 2024: ಶಿಕ್ಷಕರ ದಿನಾಚರಣೆಯ ಹಿನ್ನೆಲೆ, ಇತಿಹಾಸ, ಪ್ರಾಮುಖ್ಯತೆ ಗೊತ್ತೇ? ಇಲ್ಲಿದೆ ವಿವರ
ಮರೀಗೌಡ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದೆ ಎಂದು ಮರೀಗೌಡ ಅವರ ಆಪ್ತ ಸಹಾಯಕರು ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತರಾಗಿರುವ ಮರೀಗೌಡ ಅವರು ಮುಡಾ ಅಧ್ಯಕ್ಷರಾದ ಬಳಿಕ ಬೆಳಕಿಗೆ ಬಂದ ಮುಡಾ ಹಗರಣದ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯನವರ ಹೆಸರು ತಳಕು ಹಾಕಿಕೊಂಡಿತ್ತು. ಪ್ರತಿಪಕ್ಷಗಳ ನಾಯಕರಿಂದ ಸಾಕಷ್ಟು ರಾಜಕೀಯ ಟೀಕೆಯನ್ನು ಎದುರಿಸುತ್ತಿದ್ದಾರೆ.