ಬೆಂಗಳೂರು: ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ವರದಿಯೂ ಸಿದ್ಧವಾಗಿದೆ. ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿಗೆ ಕ್ಲೀನ್ಚಿಟ್ ನೀಡಿರುವುದು ತಿಳಿದುಬಂದಿದೆ. ಇನ್ನೂ ವಿಚಾರವಾಗಿ ಈ ಬಗ್ಗೆ ತನಗೆ ಮಾಹಿತಿ ಇಲ್ಲವೆಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಿಗಮ ಹಾಗೂ ಮಂಡಳಿಗಳಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲವೆಂಬ ಬಿಜೆಪಿಗರ ಆರೋಪಕ್ಕೆ ಪ್ರತಿಕ್ರಿಯಿಸಿ, ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಅವರ ಆರೋಪಗಳು ರಾಜಕೀಯ ಪ್ರೇರಿತವಾಗಿವೆ ಎಂದರು.
ಬದನೇಕಾಯಿ ಕೇವಲ ಅಡುಗೆಯ ರುಚಿ ಹೆಚ್ಚಿಸುವುದು ಮಾತ್ರವಲ್ಲ, ಆರೋಗ್ಯಕ್ಕೂ ಉತ್ತಮ!
ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಹಾಗೂ ಕುಟುಂಬದವರಿಗೆ ಲೋಕಾಯುಕ್ತದವರು ಕ್ಲೀನ್ ಚಿಟ್ ನೀಡಿರುವ ಬಗ್ಗೆ ಮಾತನಾಡಿದ ಸಿಎಂ, ಈ ಬಗ್ಗೆ ತನಗೆ ಮಾಹಿತಿ ಇಲ್ಲವೆಂದು ತಿಳಿಸಿದರು. ದಾವೋಸ್ ಶೃಂಗಸಭೆಯಲ್ಲಿ ಭಾಗವಹಿಸುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಸಾಲಿನ ಆಯವ್ಯಯದ ಸಿದ್ಧತೆಯಲ್ಲಿ ತೊಡಗಿಸಿಕೊಳ್ಳಬೇಕಾಗಿರುವುದರಿಂದ 2025 ರ ದಾವೋಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.