ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹೈಕೋರ್ಟ್ ಪೀಠವು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಇಂದು ಆದೇಶ ಹೊರಡಿಸಿದೆ.
ಚಳಿಗಾಲದಲ್ಲಿ ಎಷ್ಟು ನಿಮಿಷ ಸ್ನಾನ ಮಾಡಬೇಕು ಗೊತ್ತಾ!? ಹಾಗಿದ್ರೆ ವೈದ್ಯರ ಸಲಹೆ ತಿಳಿಯಿರಿ!
ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮ್ಯಯ ಹಾಗೂ ಅವರ ಪತ್ನಿ ಪಾರ್ವತಿ ಅವರಿಗೆ ಇಡಿ ನೋಟಿಸ್ ನೀಡಿತ್ತು. ಇದಕ್ಕೆ ತಡೆ ನೀಡುವಂತೆ ಸಿಎಂ ಪತ್ನಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಪಾರ್ವತಿ ಅವರಿಗೆ ತಾತ್ಕಾಲಿಕ ರಿಲೀಫ್ ನೀಡಿದೆ. ಇವರ ಜೊತೆಗೆ ಸಚಿವ ಭೈರತಿ ಸುರೇಶ್ ಅವರಿಗೂ ನೀಡಲಾಗಿದ್ದ ಇಡಿ ಸಮನ್ಸ್ಗೂ ಸಹ ಕೋರ್ಟ್ ತಡೆಯಾಜ್ಞೆ ನೀಡಿದೆ.
ಮುಡಾ ಹಗರಣದ ಕೇಸ್ನಲ್ಲಿ ಸಚಿವ ಭೈರತಿ ಸುರೇಶ್ ಆರೋಪಿಯಾಗಿಲ್ಲವೆಂದು ವಕೀಲರು ಕೋರ್ಟ್ ಗಮನಕ್ಕೆ ತಂದಿದ್ದಾರೆ. ಹೀಗಾಗಿ ಭೈರತಿ ಸುರೇಶ್ ವಿರುದ್ಧದ ಇಡಿ ಸಮನ್ಸ್ಗೂ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಫೆಬ್ರವರಿ 10ರವರೆಗೆ ಇಡಿ ಸಮನ್ಸ್ಗೆ ತಡೆ ನೀಡಿ ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 10ಕ್ಕೆ ಮುಂದೂಡಿದೆ.