ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪಾರ್ವತಿ ಸಿದ್ದರಾಮಯ್ಯ ಇಡಿ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ವಿಸ್ತರಣೆ ಮಾಡಿದೆ.
ನಿಮ್ಮ ಅದೃಷ್ಟ ಬದಲಾಗಬೇಕಾ!? ಹಾಗಿದ್ರೆ ರಾತ್ರಿ ಮಲಗೋ ಮುನ್ನ ಇದೊಂದು ಮಾತು ಹೇಳಿ ಮಲಗಿ!
ಪ್ರಕರಣದಲ್ಲಿ ಸಿಎಂ ಪತ್ನಿ ಪಾರ್ವತಿ ಅವರಿಗೆ ಇಡಿ ಸಮನ್ಸ್ ನೀಡಿದ್ದ ಹಿನ್ನೆಲೆಯಲ್ಲಿ ಸಮನ್ಸ್ ರದ್ದು ಕೋರಿ ಪಾರ್ವತಿ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲಾಗಿದೆ. ಜಾರಿ ನಿರ್ದೇಶನಾಲಯದಿಂದ ಸಿಎಂ ಪತ್ನಿ ಅರ್ಜಿಗೆ ಆಕ್ಷೇಪಣೆ ಸಲ್ಲಿಕೆ ಮಾಡಲಾಗಿತ್ತು. ಸಿಎಂ ಪತ್ನಿ ಪಾರ್ವತಿ ಪರ ಹಿರಿಯ ವಕೀಲ ಸಂದೇಶ್ ಚೌಟ ವಾದ ಮಂಡಿಸಿದ್ದು, ಮುಡಾದ 14 ಸೈಟ್ ಗಳನ್ನು ಈಗಾಗಲೇ ಮರಳಿಸಲಾಗಿದೆ. ಸೈಟ್ ಗಳನ್ನು ಮರಳಿಸಿರುವುದಿರಂದ ಇಡಿಗೆ ತನಿಖೆ ವ್ಯಾಪ್ತಿ ಇಲ್ಲ. ಅಪರಾಧದಿಂದ ಗಳಿಸಿದ ಸಂಪತ್ತಿದ್ದರೆ ಮಾತ್ರ ಇಡಿ ತನಿಖೆ ನಡೆಸಬಹುದು. ಆದರೆ ಸೈಟ್ ಗಳನ್ನು ಮರಳಿಸಿದ ನಂತರ ಇಡಿ ತನಿಖೆ ಆರಂಭಿಸಿದೆ. ಅಪರಾಧದಿಂದ ಗಳಿಸಿದ ಹಣ ಚಟುವಟಿಕೆಗೆ ಬಳಕೆಯಾಗಬೇಕು. ಇಲ್ಲವಾದರೆ ಪಿಎಂಎಲ್ಎ ಕಾಯ್ದೆಯ ಅಂಶಗಳು ಅನ್ವಯವಾಗುವುದಿಲ್ಲವೆಂದು ವಾದಿಸಿದ್ದರು.
2024ರ ಅಕ್ಟೋಬರ್ 1ರಂದೇ 14 ಸೈಟ್ ಗಳನ್ನು ಪಾರ್ವತಿ ಹಿಂತಿರುಗಿಸಿದ್ದಾರೆ. ಮುಡಾ ನೀಡಿದ ಸೈಟ್ ಗಳನ್ನು ಅವರು ಅನುಭವಿಸುತ್ತಿಲ್ಲ. ಹೀಗಾಗಿ ಅಪರಾಧದ ಸಂಪತ್ತು ಅವರ ಬಳಿ ಇಲ್ಲವೆಂದು ವಾದಿಸಿದ್ದಾರೆ. ಅಪರಾಧದ ಸಂಪತ್ತನ್ನು ಮುಚ್ಚಿಟ್ಟಿದ್ದರೆ ಆಗ ಇಡಿಗೆ ತನಿಖಾ ವ್ಯಾಪ್ತಿ ಬರುತ್ತದೆ. ಸಂಪತ್ತಿನ ಸ್ವಾಧೀನದಲ್ಲಿದ್ದರೆ, ಅನುಭವಿಸುತ್ತಿದ್ದರೆ ಇಡಿ ವ್ಯಾಪ್ತಿ ಬರುತ್ತದೆ. ಆದರೆ, ಈ ಕೇಸಿನಲ್ಲಿ ಇಡಿ ಇಸಿಐಆರ್ ದಾಖಲಿಸಿದ್ದೇ ಸರಿಯಲ್ಲವೆಂದು ಚೌಟ ವಾದಿಸಿದ್ದರು. ಹಾಗೇ, ಎಫ್ಐಆರ್ ದಾಖಲಿಸಿದ 4 ದಿನಗಳಲ್ಲೇ ಇಡಿ ಇಸಿಐಆರ್ ದಾಖಲಿಸಿದೆ. ಲೋಕಾಯುಕ್ತ ಪೊಲೀಸರ ತನಿಖೆಯನ್ನೇ ಇಡಿ ಪುನರಾವರ್ತಿಸುತ್ತಿದೆ. ಇಡಿ ಸಲ್ಲಿಸಿರುವ ಆಕ್ಷೇಪಣೆಯಲ್ಲಿ14 ಸೈಟ್ ಅಪರಾಧದ ಸಂಪತ್ತೆಂದಿದೆ. ಮುಡಾದ ಬೇರೆ ಸೈಟ್ ಗಳನ್ನೂ ಜಪ್ತಿ ಮಾಡಿದೆ ಎಂದಿದ್ದರು.
ಎಲ್ಲಾ ಅಂಶಗಳನ್ನು ಪರಿಗಣಿಸಿರುವ ಹೈಕೋರ್ಟ್, ವಿಸ್ತರಣೆ ಮಾಡಿದೆ.