ಬೆಂಗಳೂರು: ಮುಡಾ ಹಗರಣ ರಾಜ್ಯದಲ್ಲಷ್ಟೇ ಅಲ್ಲದೇ ಇಡೀ ದೇಶದಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇದೀಗ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯಗೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.
ಕುಡಿಯಲು ಹಣ ಕೊಡದ ತಾಯಿಗೆ ಮನಬಂದಂತೆ ಹಲ್ಲೆ: ಚಿಕಿತ್ಸೆ ಫಲಿಸದೇ ತಾಯಿ ದುರ್ಮರಣ!
ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕೊಟ್ಟಿರುವ ಹಿನ್ನೆಲೆ, ಲೋಕಾ ಕಚೇರಿಯಲ್ಲಿ ಇಂದು ಸಿದ್ದರಾಮಯ್ಯ ವಿಚಾರಣೆ ನಡೆಯಲಿದೆ.
ರಾಜಧಾನಿ ಬೆಂಗಳೂರಿನ ಕಾವೇರಿ ನಿವಾಸದಿಂದ ಬೆಳಗ್ಗೆ ಮೈಸೂರಿನ ಲೋಕಾಯುಕ್ತ ಕಚೇರಿಗೆ ಪ್ರಯಾಣ ಬೆಳಸಿದ್ದಾರೆ. 10 ಗಂಟೆ ಬಳಿಕ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ವಿಚಾರಣೆಗೆ ಒಳಗಾಗಲಿದ್ದಾರೆ.
ಇನ್ನೂ ಕೃಷ್ಣವಿಲಾಸ ರಸ್ತೆ ಮತ್ತು ದಿವಾನ್ಸ್ ರಸ್ತೆ ಜಂಕ್ಷನ್ನಲ್ಲಿ ಇರುವ ಲೋಕಾಯುಕ್ತ ಕಚೇರಿಯನ್ನು ಸಂಪರ್ಕಿಸುವ ರಸ್ತೆಗಳನ್ನು ಬಂದ್ ಮಾಡುವ ಮೂಲಕ ವಿಚಾರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಿದ್ದಾರೆ.
ಬುಧವಾರ ಬೆಳಗ್ಗೆ ಸಿಎಂ ಆಗಮನದ ಹಿನ್ನೆಲೆಯಲ್ಲಿ ದೇವರಾಜ ಠಾಣೆಯಲ್ಲಿ ಪೊಲೀಸ್ ಅಕಾರಿಗಳ ಸಭೆ ನಡೆಸಿದ ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅವರು, ಅಗತ್ಯ ಸೂಚನೆಗಳನ್ನು ಪೊಲೀಸ್ ಅಕಾರಿಗಳು ಮತ್ತು ಸಿಬ್ಬಂದಿಗೆ ನೀಡಿದ್ದಾರೆ. ಲೋಕಾಯುಕ್ತ ಕಚೇರಿಯನ್ನು ಸಂಪರ್ಕಿಸುವ ರಸ್ತೆಗಳನ್ನು ಸಿಎಂ ಆಗಮನಕ್ಕೂ ಮುನ್ನ ಬಂದ್ ಮಾಡಿ ಸಿಎಂ ವಿಚಾರಣೆ ಮುಗಿಸಿಕೊಂಡು ತೆರಳಿದ ಬಳಿಕ ವಾಹನ ಸಂಚಾರಕ್ಕೆ ಮುಕ್ತಗೊಳಿಸಲು ಸೂಚನೆ ನೀಡಿದ್ದಾರೆ.
ವಾಹನ ಸಂಚಾರ ನಿರ್ಬಂಧಕ್ಕೆ ದೇವರಾಜ ಪೊಲೀಸ್ ಠಾಣೆ ಆವರಣದಲ್ಲಿ ಬ್ಯಾರಿಕೇಡ್ಗಳನ್ನು ತರಿಸಿಕೊಳ್ಳಲಾಗಿದ್ದು, ಮುಂಜಾನೆ ಬ್ಯಾರಿಕೇಡ್ಗಳನ್ನು ಅಳವಡಿಸಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸುವ ಮೂಲಕ ಪರ್ಯಾಯ ಮಾರ್ಗದಲ್ಲಿ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.