ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಕುಟುಂಬವೇ ಸಂತ್ರಸ್ತರು ಎಂದು ಲೋಕಾಯುಕ್ತ ತಿಳಿಸಿದೆ. ಸಿಎಂ ಮತ್ತು ಕುಟುಂಬದ ವಿರುದ್ಧದ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಂತಿಮ ವರದಿ ತಯಾರಿಸಿದ್ದು, ಇದರಲ್ಲಿನ ಸ್ಫೋಟಕ ಅಂಶಗಳು ಲಭ್ಯವಾಗಿದೆ.
ಚಾಂಪಿಯನ್ಸ್ ಟ್ರೋಫಿಗೆ ದಿನಗಣನೆ: ನಾಯಕತ್ವಕ್ಕೆ ರೋಹಿತ್ ಶರ್ಮಾ ಗುಡ್ಬೈ!?
ಮೈಸೂರಿನ ಕೆಸರೆಯಲ್ಲಿನ ತಮ್ಮ ಜಮೀನಿಗೆ ಬದಲಿಯಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ವಿಜಯನಗರದ 3 ಮತ್ತು 4ನೇ ಹಂತಗಳಲ್ಲಿ ವಿವಿಧ ಅಳತೆಯಲ್ಲಿ ಸಿಎಂ ಕುಟುಂಬಕ್ಕೆ 14 ನಿವೇಶನಗಳನ್ನ ಹಂಚಿಕೆ ಮಾಡಿತ್ತು. ಇದರಲ್ಲಿ ಅಕ್ರಮ ನಡೆದಿದೆ ಎಂದು ಪ್ರಕರಣ ದಾಖಲಾದ ಬಳಿಕ ಹೈಕೋರ್ಟ್ ಲೋಕಾಯುಕ್ತ ತನಿಖೆಗೆ ನೀಡಿತ್ತು. ಇದೀಗ ತನಿಖೆ ನಡೆಸಿದ ʻಲೋಕಾʼ ಅಂತಿಮ ವರದಿ ತಯಾರಿಸಿದ್ದು, ಸಿಎಂ ಕುಟುಂಬವೇ ಸಂತ್ರಸ್ತರು ಎಂದು ಉಲ್ಲೇಖಿಸಿದೆ ಎನ್ನಲಾಗಿದೆ.
ಮುಡಾದ ಮಾಜಿ ಆಯುಕ್ತ ನಟೇಶ್ ಈ ಪ್ರಕರಣ ಪ್ರಮುಖ ಆರೋಪಿ. ಭೂ ಮಾಲೀಕ ಎನ್ನಲಾದ ದೇವರಾಜು ಭೂಮಿ ಮಾರುವಾಗ ಸಾಕಷ್ಟು ಮಾಹಿತಿ ಮುಚ್ಚಿಟ್ಟಿದ್ರು. ಭೂಮಿಯನ್ನು ಮುಡಾ ವಶಕ್ಕೆ ಪಡೆದಿದ್ದ ಮಾಹಿತಿಯನ್ನೂ ಮುಚ್ಚಿಟ್ಟಿದ್ರು. ಈ ವಿಷಯ ತಿಳಿಯದೇ ಮಲ್ಲಿಕಾರ್ಜುನ್ ದೇವರಾಜು ಬಳಿಯಲ್ಲಿ ಜಮೀನು ಖರೀದಿ ಮಾಡಿದ್ದಾರೆ. ಆದ್ರೆ ಅಂದಿನ ಮುಡಾ ಆಯುಕ್ತರಾಗಿದ್ದ ನಟೇಶ್ ಸರ್ಕಾರದ ನಡಾವಳಿಯನ್ನು ಸಂಪೂರ್ಣವಾಗಿ ಗಾಳಿಗೆ ತೂರಿದ್ದಾರೆ ಎಂದು ಲೋಕಾಯುಕ್ತ ವರದಿಯಲ್ಲಿ ಉಲ್ಲೇಖಿಸಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.
ಸಿಎಂ ಮತ್ತು ಕುಟುಂಬದ ಸದಸ್ಯರು ಈ ಪ್ರಕರಣದಲ್ಲಿ ಸಂತ್ರಸ್ತರಾಗಿದ್ದಾರೆ. ಭೂಮಿ ಖರೀದಿ ಮಾಡುವಾಗ ಆಗಲಿ, ದಾನ ಮಾಡುವಾಗ ಆಗಲಿ ಯಾವುದೇ ಪ್ರಭಾವ ಬೀರಿಲ್ಲ. ಸಿಎಂ ಸಿದ್ದರಾಮಯ್ಯ ಸಹ ಅಧಿಕಾರ ದುರುಪಯೋಗ ಮಾಡಿಕೊಂಡಿರುವುದಾಗಲಿ ಪ್ರಭಾವ ಬೀರಿರುವುದಾಗಲಿ ಸಾಕ್ಷ್ಯ ಸಿಕ್ಕಿಲ್ಲ. ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿಯೂ ಪ್ರಭಾವ ಬೀರಿರೋದಕ್ಕೆ ಸಾಕ್ಷ್ಯಗಳು ಇಲ್ಲ ಎಂದು ಹೇಳಿದೆ.