ಬೆಂಗಳೂರು :- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯಗೆ ನಾಳೆ ನಿರ್ಣಾಯಕ ದಿನ ಆಗಿದ್ದು, ಹೈಕೋರ್ಟ್ನಲ್ಲಿ ಪ್ರಾಸಿಕ್ಯೂಷನ್ ಭವಿಷ್ಯ ಏನಾಗಲಿದೆ ಎಂಬ ಕುತೂಹಲ ಎಲ್ಲರಲ್ಲೂ ಇದೆ.
DK Shivakumar: ರಾಹುಲ್ ಗಾಂಧಿ ಭೇಟಿ ಮಾಡಿ ಕುತೂಹಲ ಮೂಡಿಸಿದ DCM ಡಿಕೆಶಿ!
ರಾಜ್ಯಪಾಲರ ನಿರ್ಧಾರವನ್ನು ಹೈಕೋರ್ಟ್ ಎತ್ತಿಹಿಡಿಯುತ್ತದೆಯಾ? ಅಥವಾ ಪ್ರಾಸಿಕ್ಯೂಷನ್ಗೆ ನೀಡಿರುವ ಅನುಮತಿ ರದ್ದುಮಾಡುತ್ತದೆಯಾ ಎಂಬುದು ತೀವ್ರ ಕುತೂಹಲ ಕೆರಳಿಸಿದೆ. ಸೆಪ್ಟೆಂಬರ್ 12ರಂದೇ ವಿಚಾರಣೆಯನ್ನು ಮುಗಿಸೋಣ ಎಂದು ಈಗಾಗಲೇ ನ್ಯಾಯಮೂರ್ತಿಗಳು ಹೇಳಿದ್ದಾರೆ.
ಗುರುವಾರ ಸಿಎಂ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ವಾದ ಮಂಡಿಸಲಿದ್ದು, ರಾಜ್ಯಪಾಲರ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಲಿದ್ದಾರೆ. ಹೀಗಾಗಿ ನಾಳೆ ಹೈಕೋರ್ಟ್ನಲ್ಲಿ ಹೈವೋಲ್ಟೇಜ್ ವಾದ-ಪ್ರತಿವಾದ ನಡೆಯುವ ಸಾಧ್ಯತೆಯಿದೆ.
ಮತ್ತೊಂದೆಡೆ, ಕಾಂಗ್ರೆಸ್ನಲ್ಲಿನ ಸಿಎಂ ಕುರ್ಚಿ ರೇಸ್ ಬಗ್ಗೆ ಬಿಜೆಪಿ ನಾಯಕರು ಲೇವಡಿ ಮಾಡಿದ್ದಾರೆ. ಸಿದ್ದರಾಮ್ಯಯರ ಸಿಎಂ ಕುರ್ಚಿ ಉಳಿಯಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರೆ, ಯಾವುದೇ ಕ್ಷಣದಲ್ಲಿ ಸಿಎಂ ರಾಜೀನಾಮೆ ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಇನ್ನು ಮಾಜಿ ಸಚಿವ ಸುಧಾಕರ್, ಸಿದ್ದರಾಮಯ್ಯಗೆ ಕಾಂಗ್ರೆಸ್ನವರೇ ಖೆಡ್ಡಾ ತೋಡಿದ್ದಾರೆ ಎಂದು ಕುಟುಕಿದ್ದಾರೆ.