ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮೂಡಾ) ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣ ಸಂಬಂಧ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು ಇದೇ ಮೊದಲ ಬಾರಿಗೆ ತನಿಖೆ ಕುರಿತು ಮಾಹಿತಿ ನೀಡಿದೆ.
ಜ.31 ರಿಂದ ಸಂಸತ್ತಿನ ಬಜೆಟ್ ಅಧಿವೇಶನ: ದಾಖಲೆ ನಿರ್ಮಿಸಲಿದ್ದಾರೆ ನಿರ್ಮಲಾ ಸೀತಾರಾಮನ್!
ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಇನ್ನಿತರರ ವಿರುದ್ಧ ಸಂಬಂಧಿಸಿದ ಮೂಡಾ ನಿವೇಶನ ಹಂಚಿಕೆ ಹಗರಣ ತನಿಖೆ ನಡೆಸುತ್ತಿರುವ ಇ.ಡಿ.ಅಧಿಕಾರಿಗಳು 300 ಕೋಟಿ ಮೌಲ್ಯದ ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಪ್ರಕರಣ ಸಂಬಂಧ ರಿಯಲ್ ಎಸ್ಟೇಟ್ ಏಜೆಂಟ್ ಉದ್ಯಮಿ ಸೇರಿದಂತೆ ವಿವಿಧ ವ್ಯಕ್ತಿಗಳ ಹೆಸರಿನಲ್ಲಿದ್ದ ಪ್ರಾಪರ್ಟಿ, ನಿವೇಶನ, ಜಮೀನು ಸೇರಿದಂತೆ ಇನ್ನಿತರ ಆಸ್ತಿ ಒಳಗೊಂಡಂತೆ 300 ಕೋಟಿ ಮೌಲ್ಯದ 142 ಸ್ಥಿರಾಸ್ತಿಯನ್ನ ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಇ.ಡಿ ತಿಳಿಸಿದೆ.
ಮೈಸೂರಿನ ಕೆಸರೆ ಗ್ರಾಮದ ಸರ್ವೇ ನಂ.464ರಲ್ಲಿ 3 ಎಕರೆ 16 ಗುಂಟೆ ಜಮೀನನ್ನು ಪ್ರಾಧಿಕಾರವು ಭೂಸ್ವಾಧೀನವಿಲ್ಲದೇ ಉಪಯೋಗಿಸಿಕೊಂಡಿದ್ದಕ್ಕಾಗಿ ಪರಿಹಾರದ ಬದಲಾಗಿ ವಿಜಯನಗರ 3 ಮತ್ತು 4 ನೇ ಹಂತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಹೆಸರಿನಲ್ಲಿ ಮಂಜೂರು ಮಾಡಲಾಗಿದ್ದ ಮಾರುಕಟ್ಟೆ ದರದ 56 ಕೋಟಿ ಮೌಲ್ಯದ 14 ನಿವೇಶನಗಳನ್ನು ಮೂಡಾ ಮಂಜೂರು ಮಾಡಿತ್ತು. ಹಗರಣದಲ್ಲಿ ಬೇನಾಮಿ ಹಾಗೂ ಪ್ರಭಾವಿಗಳ ಹೆಸರಿನಲ್ಲಿ ಸೈಟು ಮಂಜೂರು ಮಾಡುವುದಲ್ಲದೆ, ಅಕ್ರಮವಾಗಿ ಕೋಟ್ಯಂತರ ರೂಪಾಯಿ ಹಣ ವರ್ಗಾವಣೆ ಮಾಡಿರುವುದು ಕಂಡುಬಂದಿದೆ ಎಂದು ಇ.ಡಿ. ತಿಳಿಸಿದೆ.
ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ದಾಖಲಾದ ಎಫ್ಐಆರ್ ಇ.ಡಿ ಇಸಿಐಆರ್(ECIR) ದಾಖಲಿಸಿಕೊಂಡಿತ್ತು. ಸಿಎಂ ಸಿದ್ದರಾಮಯ್ಯ ಕುಟುಂಬವು ಅಧಿಕಾರ ದುರ್ಬಳಕೆ ಮಾಡಿಕೊಂಡು ಮುಡಾದಿಂದ ಅಕ್ರಮವಾಗಿ ನಿವೇಶನಗಳನ್ನು ಪಡೆದಿದ್ದು, ಈ ಬಗ್ಗೆ ತನಿಖೆ ನಡೆಸಬೇಕು ದೂರಿನಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಖಾಸಗಿ ದೂರು ದಾಖಲಿಸಿದ್ದರು. ಇದರ ವಿಚಾರಣೆ ನಡೆಸಿದ್ದ ಕೋರ್ಟ್, ಸಿದ್ದರಾಮಯ್ಯ ಕುಟುಂಬ ಹಾಗೂ ಅಧಿಕಾರಿಗಳ ವಿರುದ್ಧ ಕಳೆದ ವರ್ಷ ಸೆ.27ರಂದು ಲೋಕಾಯುಕ್ತ ಅಧಿಕಾರಿಗಳು ಎಫ್ಐಆರ್ ದಾಖಲಿಸಿಕೊಂಡಿದ್ದರು. ಹಗರಣದಲ್ಲಿ ಕೊಟ್ಯಂತರ ರೂಪಾಯಿ ಅಕ್ರಮವಾಗಿದೆ ಎಂದು ಪಿಎಂಎಲ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಬೇಕೆಂದು ಸ್ನೇಹಮಯಿ ಕೃಷ್ಣ ಅವರು ಇ.ಡಿ.ಗೂ ದೂರು ನೀಡಿದ್ದರು.