ಬೆಂಗಳೂರು:- ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಖಾಸಗಿ ದೂರು ನೀಡಿದ್ದಾರೆ.
ವರುಣಾರ್ಭಟಕ್ಕೆ ಅಕ್ಷರಶಃ ನಲುಗಿದ ಬೆಂಗಳೂರು: ಕೆರೆಯಾದ ರಸ್ತೆ, ಮನೆಗೆ ನುಗ್ಗಿದ ನೀರು!
ಇದೇ ಮುಡಾ ಹಗರಣ ಸಂಬಂಧ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ ಅವರು ಈಗಾಗಲೇ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ನಿಮ್ಮ ವಿರುದ್ಧ ಏಕೆ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಬಾರದು ಎಂದು ಸಿದ್ದರಾಮಯ್ಯಗೆ ಶೋಕಾಸ್ ನೋಟಿಸ್ ನೀಡಿದ್ದಾರೆ. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಸರ್ಕಾರ ಸಹ ನೋಟಿಸ್ ವಾಪಸ್ ಪಡೆದುಕೊಂಡು ಅಬ್ರಾಹಂ ಅವರ ದೂರು ತಿರಸ್ಕರಿಸಬೇಕೆಂದು ಒಂದು ಸಾಲಿನ ನಿರ್ಣಯ ಅಂಗೀಕರಿಸಿದೆ. ಹೀಗಾಗಿ ಸಿದ್ದರಾಮಯ್ಯನವರ ರಾಜಕೀಯ ಭವಿಷ್ಯ ರಾಜ್ಯಪಾಲರ ಅಂಗಳದಲ್ಲಿದ್ದು, ಅವರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡುತ್ತಾರಾ? ಅಥವಾ ಇಲ್ಲ ಎನ್ನುವ ಕುತೂಹಲ ಮೂಡಿಸಿದೆ.
ಅಲ್ಲದೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಸ್ನೇಹಮಯಿ ಕೃಷ್ಣ ಖಾಸಗಿ ದೂರು ದಾಖಲಿಸಿದ್ದು, ನಾಳೆ ಖಾಸಗಿ ದೂರು ವಿಚಾರಣೆಗೆ ಸ್ವೀಕರಿಸಬೇಕೋ ಬೇಡ್ವಾ ಎನ್ನುವ ಬಗ್ಗೆ ಆದೇಶ ನೀಡುವ ಸಾಧ್ಯತೆಗಳಿವೆ. ಇದರ ಮಧ್ಯ ಇದೀಗ ಅಬ್ರಾಹಂ ಅವರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಿದ್ದರಾಮಯ್ಯ ಅವರು ಖಾಸಗಿ ದೂರು ನೀಡಿದ್ದಾರೆ