ಮೈಸೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೈಸೂರಿನಲ್ಲಿರುವ ಲೋಕಾಯುಕ್ತ ಕಚೇರಿಗೆ ತೆರಳಿ ವಿಚಾರಣೆಗೆ ಹಾಜರಾಗಿದ್ದಾರೆ. 40 ವರ್ಷಗಳ ರಾಜಕೀಯ ಜೀವನದಲ್ಲಿ ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಲೋಕಾಯುಕ್ತ ವಿಚಾರಣೆ ಎದುರಿಸಿದ್ದಾರೆ. ಸತತ 2 ಗಂಟೆಗಳ ಕಾಲ ಸಿಎಂ ವಿಚಾರಣೆ ನಡೆಸಲಾಗಿದ್ದು, 40 ಕ್ಕೂ ಹೆಚ್ಚು ಪ್ರಶ್ನೆಗಳನ್ನು ಕೇಳಲಾಯಿತು.ವಿಚಾರಣೆ ಬಳಿಕ, ಮತ್ತೆ ವಿಚಾರಣೆಗೆ ಕರೆದರೆ ಬರಬೇಕು ಎಂದು ಅಧಿಕಾರಿಗಳು ಸಹಿ ಪಡೆದುಕೊಂಡರು. ವಿಚಾರಣೆ ಬಳಿಕ ಸಿಎಂ ಸಿದ್ದರಾಮಯ್ಯ ಆರಾಮಾಗಿ ಹೊರಬಂದರು. ನಂತರ ತಮ್ಮ ಕಾರು ಹತ್ತಿ ವಾಪಸ್ ಆದರು.
ಲೋಕಾಯುಕ್ತ ಪೊಲೀಸರ ವಿಚಾರಣೆಗೆ ಹಾಜರಾಗುವ ಮುನ್ನ ಸಿಎಂ ಸಿದ್ದರಾಮಯ್ಯ ಕಾನೂನು ಸಲಹೆಗಾರ ಜೊತೆ ಸಭೆ ನಡಸಿದ್ದರು. ಸರ್ಕಾರಿ ಕಾರಿನಲ್ಲಿ, ಬೆಂಗಾವಲು ವಾಹನದಲ್ಲಿ ವಿಚಾರಣೆಗೆ ಬರಲು ಸಿಎಂ ಸಜ್ಜಾಗಿದ್ದರು. ಆದರೆ, ಕಾನೂನು ಸಲಹೆಗಾರು ನೀಡಿದ ಸಲಹೆಯಂತೆ ಸರ್ಕಾರಿ ಸವಲತ್ತು ಬಳಸದೇ, ಸರ್ಕಾರಿ ಕಾರನ್ನೂ ಬಳಸದೇ ತಮ್ಮ ಸಿಬ್ಬಂದಿಯನ್ನೂ ಜೊತೆಗೆ ಕರೆ ತರದೇ ಸಿಎಂ ಸಿದ್ದರಾಮಯ್ಯ ಸಾಮಾನ್ಯರಂತೆ ಬಂದರು.
Driving License ಕಳೆದು ಹೋಗಿದ್ಯಾ.? ಹಾಗಿದ್ರೆ ಮರಳಿ ಪಡೆಯಲು ಹೀಗೆ ಮಾಡಿ ಸಾಕು
ವಿಚಾರಣೆ ಎದುರಿಸಲು ಕಚೇರಿಯೊಳಗೆ ಬಂದ ಸಿಎಂ ಸಿದ್ದರಾಮಯ್ಯ, ಮೊದಲಿಗೆ ಅನೌಪಚಾರಿಕವಾಗಿ ಎಸ್ಪಿ ಉದೇಶ್ ಜೊತೆ ಮಾತನಾಡಿದರು. ನಾನು ಸಿಎಂ ಎಂದು ಅಂಜಿಕೆ ಇಟ್ಟುಕೊಳ್ಳಬೇಡಿ, ಸಂಕೋಚ ಇಲ್ಲದೇ ವಿಚಾರಣೆ ಮಾಡಿ ಎಂದು ಸಲಹೆ ನೀಡಿದರು. ‘ನಾನು ಸಿಎಂ ಎಂದು ಅಂಜಿಕೆ ಇಟ್ಟುಕೊಳ್ಳಬೇಡಿ, ಆರಾಮಾಗಿ ನಿಮ್ಮ ಕೆಲಸ ನೀವು ಮಾಡಿ. ನಾನು ಈ ಕ್ಷಣಕ್ಕೆ ನಿಮಗೆ ಸಿಎಂ ಅಲ್ಲ, ನೀವು ಒಂದು ಕೇಸ್ನಲ್ಲಿ ನನಗೆ ನೋಟಿಸ್ ಕೊಟ್ಟಿದ್ದೀರಿ.
ನೋಟಿಸ್ ಕೊಟ್ಟಿದ್ದಕ್ಕೆ ನಾನು ಬಂದಿದ್ದೇನೆ. ನಿಮ್ಮ ಪ್ರಕ್ರಿಯೆಗಳು ಹೇಗಿದೆಯೋ ಹಾಗೇ ಮಾಡಿ. ನೀವು ಯಾವ ಪ್ರಶ್ನೆ ಬೇಕಾದರೂ ಕೇಳಿ, ನನಗೆ ಗೊತ್ತಿರುವುದನ್ನು ಹೇಳುತ್ತೇನೆ. ಎಷ್ಟು ಸಮಯವಾದ್ರೂ ತೆಗೆದುಕೊಳ್ಳಿ, ಯಾವ ಪ್ರಶ್ನೆಗಳಿದ್ರೂ ಕೇಳಿ’ ಎಂದು ಲೋಕಾಯುಕ್ತ ಎಸ್ಪಿಗೆ ಸಿದ್ದರಾಮಯ್ಯ ಹೇಳಿದರು. ನೀವು ಮತ್ತೆ ಕರೆದರೆ ವಿಚಾರಣೆಗೆ ಬರ್ತೀನಿ. ಅಗತ್ಯವಿದ್ದರೆ ಕರೆಯಿರಿ ಎಂದು ವಿಚಾರಣೆ ಅಂತ್ಯದ ಬಳಿಕ ಸಿಎಂ ತಿಳಿಸಿದರು. ನಂತರ ಮೈಸೂರಿನಿಂದ ಚನ್ನಪಟ್ಟಣದತ್ತ ಪ್ರಯಾಣ ಬೆಳೆಸಿದರು.