ಮೈಸೂರು:- ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಂಬಂಧಿಗೆ ಇಡಿ ಡ್ರಿಲ್ ತೆಗೆದುಕೊಂಡಿದೆ.
ಚಳಿಗಾಲದಲ್ಲಿ ಗೀಸರ್ ಹೇಗೆ ಬಳಸಬೇಕು? ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ!
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಅವರ ವಿಚಾರಣೆ ನಡೆಸಿದರು. ಮುಡಾ ಹಗರಣದಲ್ಲಿ ಮಲ್ಲಿಕಾರ್ಜುನ ಸ್ವಾಮಿ 3ನೇ ಆರೋಪಿಯಾಗಿದ್ದಾರೆ.
ಶಾಂತಿನಗರದಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಯಲ್ಲಿ ವಿಚಾರಣೆ ನಡೆದಿದ್ದು, ಕೆಸರೆ ಗ್ರಾಮದಲ್ಲಿರುವ 3.16 ಎಕರೆ ಜಮೀನಿನ ಕುರಿತು ಮಲ್ಲಿಕಾರ್ಜುನ ಸ್ವಾಮಿ ಅವರಿಂದ ಮಾಹಿತಿ ಪಡೆದರು ಎಂದು ಮೂಲಗಳಿಂದ ಮಾಹಿತಿ ದೊರೆತಿದೆ.
ಲೋಕಾಯುಕ್ತ ಅಧಿಕಾರಿಗಳು ಮುಡಾದ ಹಿಂದಿನ ಆಯುಕ್ತರಾಗಿದ್ದ ನಟೇಶ್ ಅವರಿಗೆ ನೋಟಿಸ್ ನೀಡಿದ್ದಾರೆ. ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಮೈಸೂರು ಲೋಕಾಯುಕ್ತ ಎಸ್ಪಿ ಟಿ.ಜೆ.ಉದೇಶ್ ನೋಟಿಸ್ ಮೂಲಕ ಹೇಳಿದ್ದಾರೆ.