ಬೆಂಗಳೂರು:- ರಾಜ್ಯದ ದೊರೆ ಸಿಎಂ ಸಿದ್ದರಾಮಯ್ಯ ಇಂದು ಹಾವೇರಿ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಕ್ರಮ ಹಾಗು ಸಂಗೊಳ್ಳಿ ರಾಯಣ್ಣನ ಕಂಚಿನ ಪುತ್ತಳಿ ಅನಾವರಣ ಮಾಡಿದರು. ಇನ್ನೂ ಸಿಎಂ ಮೂಡ ಸಂಕಷ್ಟದ ನಡುವೆ ಇಂದು ಐತಿಹಾಸಿಕ ಪ್ರಸಿದ್ಧಿ ಪಡೆದ ದೇವರಗುಡ್ಡದ ಮಾಲತೇಶ ಸ್ವಾಮಿಯ ದರ್ಶನ ಪಡೆದು ತಮ್ಮ ಮೆಲೆ ಬಂದಿರುವ ಆರೋಪಗಳಿಂದ ಮುಕ್ತರಾಗುವಂತೆ ಮಾಲತೇಶ ದೆವರಿಗೆ ವಿಶೇಷ ಪೂಜೆ ಸಲ್ಲಿಸಿದ್ರು.
ಮಹದೇವಪುರದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಛೇರಿ ಉದ್ಘಾಟನೆ!
ಎಸ್ ನಾಡಿನ ದೊರೆ ಸಿಎಂ ಸಿದ್ಧರಾಮಯ್ಯ ಮೂಡ ಸಂಕಷ್ಟದಿಂದ ಪರಾಗಲು ಐತಿಹಾಸಿಕ ಮಾಲತೇಶ ದೇವರ ಮೊರೆಹೋಗಿದ್ದಾರೆ. ಹೌದು ಸಿಎಂ ಸಿದ್ದರಾಮಯ್ಯ ತಮ್ಮ ಮೇಲಿರುವ ಆರೋಪದಿಂದ ಮುಕ್ತರಾಗಲು ಇಂದು ಹಾವೇರಿ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಮಾಲತೇಶ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು. ನನ್ನ ವಿರುದ್ಧ ನಡೆಯುತ್ತಿರುವ ಬಿಜೆಪಿ-ಜೆಡಿಎಸ್ನ ಸೇಡು, ಹೊಟ್ಟೆಕಿಚ್ಚಿನ ಪಿತೂರಿ ಸಹಿಸಬೇಡಿ ಎಂದು ನೇರೆದಿದ್ದ ಜನಸ್ತೋಮ ನೋಡಿ ತಮ್ಮ ಭಾಷಣದಲ್ಲಿ ಅಕ್ರೋಶ ವ್ಯಕ್ತಪಡಿಸಿದರು. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ದೇವರಗುಡ್ಡದಲ್ಲಿ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಕಂಚಿನ ಪುತ್ಥಳಿ ಲೋಕಾರ್ಪಣೆಗೊಳಿಸಿದ ಬಳಿಕ ಕನಕಭವನವನ್ನು ಉದ್ಘಾಟಿಸಿ ಮಾತನಾಡಿದರು. ಅವರು
ನನ್ನ ವಿರುದ್ಧ ನಡೆಯುತ್ತಿರುವ ಷಡ್ಯಂತ್ರವನ್ನು ಸಹಿಸುತ್ತೀರಾ ಎಂದು ಕಾರ್ಯಕ್ರಮದಲ್ಲಿ ನೆರೆದಿದ್ದ ಜನಸ್ತೋಮಕ್ಕೆ ಸಿಎಂ ಪ್ರಶ್ನಿಸಿದರು.”ನಾವು ಸಹಿಸಲ್ಲ. ರೊಚ್ಚೆಗೇಳ್ತೇವೆ” ಎಂದು ಜನಸ್ತೋಮ ನೋಡಿ ಪ್ರತಿಕ್ರಿಯಿಸಿತು.
ಮಾಲತೇಶ ದೇವರ ಆಶೀರ್ವಾದ-ನಿಮ್ಮ ಪ್ರೀತಿ ನನ್ನ ಮೇಲಿರಲಿ, ದೇವರಗುಡ್ಡದಲ್ಲಿ ಪೂಜೆ ಸಲ್ಲಿಸಿದ ಬಳಿಕ ಬಹಿರಂಗ ಸಭೆಯಲ್ಲಿ ಸಿಎಂ ಮನವಿ ಮಾಡಿದರು.
ನಾನು ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿ ಜನರಿಗೆ ಕೊಟ್ಟ ಮಾತನ್ನು ಈಡೇರಿಸುತ್ತಿದ್ದೇವೆ. ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೂ ಹಲವು ಭಾಗ್ಯಗಳನ್ನು ಜನರ ಮಡಿಲಿಗೆ ಹಾಕುವ ಮೂಲಕ ನುಡಿದಂತೆ ನಡೆದಿದ್ದೇನೆ. ಎರಡನೇ ಬಾರಿ ಸಿಎಂ ಆಗಿ ಒಂದೇ ವರ್ಷದಲ್ಲಿ ಐದಕ್ಕೆ ಐದೂ ಗ್ಯಾರಂಟಿಗಳನ್ನೂ ಜಾರಿ ಮಾಡಿದ್ದೇನೆ ಎಂದರು.
ನಾನು ಅಸೂಯೆ ಮಾಡುವವರಿಂದ ದ್ವೇಷದ ರಾಜಕಾರಣ ಮಾಡುವವರಿಂದ ಅಧಿಕಾರಕ್ಕೆ ಬರಲಿಲ್ಲ. ಜನರ ಆಶೀರ್ವಾದದಿಂದ ಹಿಂದುಳಿದ ಸಮಾಜದ ಸಿದ್ದರಾಮಯ್ಯ ಸಿಎಂ ಆಗಿರೋದು. ಜನರ ಆಶೀರ್ವಾದ ಇರುವವರೆಗೂ ನನಗೆ ಯಾರೂ ಏನೂ ಮಾಡಲಾಗುವುದಿಲ್ಲ ಎಂದು ಬಿಜೆಪಿ-ಜೆಡಿಎಸ್ ನವರಿಗೆ ಎಚ್ಚರಿಕೆ ನೀಡಿದರು.
ಜಾತಿ ವ್ಯವಸ್ಥೆಯ ಈ ಸಮಾಜದಲ್ಲಿ ಅತ್ಯಂತ ಕಟ್ಟ ಕಡೆಯ ವ್ಯಕ್ತಿಗೂ ಅವಕಾಶ ಸಿಗಬೇಕು ಎಂದು ಮಹಾತ್ಮಗಾಂಧಿ ಹೇಳಿದ್ದರು. ಇದರಲ್ಲಿ ನಂಬಿಕೆ ಇಟ್ಟು ಕಾರ್ಯಕ್ರಮ ರೂಪಿಸುತ್ತಿದ್ದೇನೆ. ಇದೇ ಬಿಜೆಪಿ-ಜೆಡಿಎಸ್ ನವರಿಗೆ ಹೊಟ್ಟೆಕಿಚ್ಚು. ಈ ಹೊಟ್ಟೆಕಿಚ್ಚಿನಿಂದ ಅವರೇ ನಾಶ ಆಗುತ್ತಾರೆಯೇ ಹೊರತು ನನ್ನನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಎಚ್ಚರಿಸಿದರು.
ನಾನು ಯಾರಿಗೂ, ಯಾವುದೇ ಪಿತೂರಿ-ಷಡ್ಯಂತ್ರಕ್ಕೂ ಭಯ ಪಡುವವನಲ್ಲ. ಬ್ರಿಟೀಷರಿಗೆ ಸಿಂಹಸ್ವಪ್ನವಾಗಿದ್ದ ಗೆರಿಲ್ಲಾ ಸೇನಾನಿ ರಾಯಣ್ಣನನ್ನು ಬ್ರಿಟೀಷರಿಗೆ ಮೋಸದಿಂದ ಹಿಡಿದುಕೊಟ್ಟವರು ನಮ್ಮವರೇ. ಇಂಥಾ ದೇಶದ್ರೋಹಿಗಳು ನಮ್ಮೊಳಗೆ ಈಗಲೂ ಇದ್ದಾರೆ. ಇಂಥಾ ದೇಶದ್ರೋಹಿಗಳು ಎಲ್ಲಾ ಕಾಲದಲ್ಲೂ ಇರುತ್ತಾರೆ. ಇಂಥವರನ್ನು ನಾವು ಒಗ್ಗಟ್ಟಿನಿಂದ ಎದುರಿಸಬೇಕು, ಸೋಲಿಸಬೇಕು ಎಂದರು.
ಸಂಗೊಳ್ಳಿ ರಾಯಣ್ಣನವರ ದೇಶಪ್ರೇಮ, ಹೋರಾಟ ಮನೋಭಾವವನ್ನು ನಾವು ರೂಢಿಸಿಕೊಂಡಾಗ ಮಾತ್ರ ರಾಯಣ್ಣನ ಆಶಯ ಈಡೇರುತ್ತದೆ ಎಂದರು. ಇನ್ನೂ ಕಾರ್ಯಕ್ರಮದಲ್ಲಿ
ತಿಂಥಣಿ ಕನಕ ಗುರುಪೀಠದ ಸಿದ್ದರಾಮೇಶ್ವರ ಸ್ವಾಮೀಜಿ, ನರಸೀಪುರ ಅಂಬಿಗರ ಚೌಡಯ್ಯ ಪೀಠದ ಶಾಂತಭೀಷ್ಮ ಚೌಡಯ್ಯ ಮಹಾಸ್ವಾಮಿಗಳು, ದೇವರಗುಡ್ದದ ಕರಿಯಪ್ಪಜ್ಜ ಹಕಾರಿ ಅವರ ದಿವ್ಯಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ಬಸವರಾಜ ಶಿವಣ್ಣನವರ ಭಾಗವಹಿಸಿದ್ದರು.
ಒಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಮೇಲಿರುವ ಆರೋಪದಿಂದ ಮುಕ್ತಾಗಲು ದೇವರ ಮೊರೆ ಹೋಗಿದ್ದು ಜೊತೆಗೆ ಬಿಜೆಪಿ ಜೆಡಿಎಸ್ ನವರಿಗೆ ಕಾನೂನಿನ ಉತ್ತರ ಕೊಡ್ತಾರ ಕಾದು ನೋಡಬೇಕಿದೆ.