ಬೆಂಗಳೂರು:- ಬಿವೈ ವಿಜಯೇಂದ್ರ ನೇತೃತ್ವದ ಮೊದಲ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೆ ಮುಹೂರ್ತ ಫಿಕ್ಸ್ ಆಗಿದೆ.
ಅರಮನೆ ಮೈದಾನದಲ್ಲಿ ನಡೆಯಲಿದೆ. ಜನವರಿ 19ಕ್ಕೆ ನಿಗದಿಯಾಗಿ ಮುಂದೂಡಲಾಗಿತ್ತು. ಇದೀಗ ಹೊಸ ದಿನಾಂಕ ನಿಗದಿಯಾಗಿದ್ದು, ಈ ರಾಜ್ಯ ಬಿಜೆಪಿ ಕಾರ್ಯಕಾರಿಣಿಯಲ್ಲಿ ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅವರು ಭಾಗಿಯಾಗಲಿದ್ದಾರೆ.
ಈ ಬಗ್ಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಅವರು ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ ಕಾರ್ಯಕಾರಣಿ ಸಭೆಯ ಮಾಹಿತಿ ನೀಡಿದರು.
ಜನವರಿ 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೆಳಿಗ್ಗೆ 9.30ರಿಂದ ಸಂಜೆ 5.30ರವರೆಗೆ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಈ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಇನ್ನು ಈ ಸಭೆಗೆ ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅವರು ಆಗಮಿಸಲಿದ್ದಾರೆ ಎಂದು ವಿವರಿಸಿದರು.