ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಅತೀ ಹೆಚ್ಚು ಸಕ್ಸಸ್ಫುಲ್ ಆಗಿರೋ ತಂಡಗಳ ಪೈಕಿ ಮುಂಬೈ ಇಂಡಿಯನ್ಸ್ ಒಂದು. ಬರೋಬ್ಬರಿ 5 ಬಾರಿ ಐಪಿಎಲ್ ಚಾಂಪಿಯನ್ ಆಗಿದೆ. ತನ್ನ ಹಳೆಯ ತಂಡದಲ್ಲಿ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್, ಜಸ್ಪ್ರೀತ್ ಬುಮ್ರಾ ಜೊತೆಗೆ ತಿಲಕ್ ವರ್ಮಾ ಅವರನ್ನು ಉಳಿಸಿಕೊಂಡಿದೆ.
11ನೇ ಟ್ರೋಫಿ ಮುಡಿಗೇರಿಸಿಕೊಳ್ಳವಲ್ಲಿ ಮುಂಬೈ ಇಂಡಿಯನ್ಸ್ ಯಶಸ್ವಿಯಾಗಿದೆ. 2008 ರಿಂದ ಐಪಿಎಲ್ನಲ್ಲಿ ಕಣಕ್ಕಿಳಿಯುತ್ತಿರುವ ಮುಂಬೈ ಇಂಡಿಯನ್ಸ್ ಚೊಚ್ಚಲ ಟ್ರೋಫಿ ಗೆದ್ದಿರುವುದು ಚಾಂಪಿಯನ್ಸ್ ಲೀಗ್ ಟಿ20 ಟೂರ್ನಿಯಲ್ಲಿ. 2011 ರಲ್ಲಿ ನಡೆದ ಈ ಟೂರ್ನಿಯಲ್ಲಿ ಮುಂಬೈ ಪಡೆ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಇದಾದ ಬಳಿಕ 2013 ರಲ್ಲೂ ಚಾಂಪಿಯನ್ಸ್ ಲೀಗ್ ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಯಿತು.
ಇನ್ನು ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ ಮೊದಲ ಟ್ರೋಫಿ ಗೆದ್ದಿದ್ದು 2013 ರಲ್ಲಿ. ಆ ಬಳಿಕ 2015, 2017, 2019 ಮತ್ತು 2020 ರಲ್ಲಿ ಟ್ರೋಫಿ ಎತ್ತಿ ಹಿಡಿಯುವಲ್ಲಿ ಮುಂಬೈ ಇಂಡಿಯನ್ಸ್ ಯಶಸ್ವಿಯಾಗಿದೆ. ಈ ಮೂಲಕ ಐಪಿಎಲ್ನ ಅತ್ಯಂತ ಯಶಸ್ವಿ ತಂಡಗಳಲ್ಲಿ ಒಂದೆನಿಸಿಕೊಂಡಿದೆ.
ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲೂ ಮುಂಬೈ ಇಂಡಿಯನ್ಸ್ ತಂಡ ಟ್ರೋಫಿ ಎತ್ತಿ ಹಿಡಿಯುವಲ್ಲಿ ಯಶಸ್ವಿಯಾಗಿದೆ. 2023 ರಲ್ಲಿ ನಡೆದ ಈ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡವನ್ನು ಸೋಲಿಸಿ ಮುಂಬೈ ಇಂಡಿಯನ್ಸ್ ವನಿತಾ ಪಡೆ ಚೊಚ್ಚಲ ಕಿರೀಟ ಮುಡಿಗೇರಿಸಿಕೊಂಡಿದೆ.
ಯುಎಇನಲ್ಲಿ ನಡೆಯುವ ಇಂಟರ್ನ್ಯಾಷನಲ್ ಲೀಗ್ ಟಿ20 ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಎಂಐ ಎಮಿರೇಟ್ಸ್ ಹೆಸರಿನ ತಂಡವನ್ನು ಕಣಕ್ಕಿಳಿಸುತ್ತಿದೆ. ಈ ತಂಡವು 2024 ರಲ್ಲಿ ಟ್ರೋಫಿ ಎತ್ತಿ ಹಿಡಿಯುವಲ್ಲಿ ಯಶಸ್ವಿಯಾಗಿದೆ.
ಸೌತ್ ಆಫ್ರಿಕಾ ಟಿ20 ಲೀಗ್ನಲ್ಲೂ ಮುಂಬೈ ಇಂಡಿಯನ್ಸ್ ಟ್ರೋಫಿ ಖಾತೆಯನ್ನು ತೆರೆದಿದೆ. ಈ ಬಾರಿಯ ಎಸ್ಎ20 ಲೀಗ್ನ ಫೈನಲ್ ಪಂದ್ಯದಲ್ಲಿ ಸನ್ರೈಸರ್ಸ್ ಈಸ್ಟರ್ನ್ ಕೇಪ್ ತಂಡವನ್ನು ಮಣಿಸಿ ಎಂಐ ಕೇಪ್ಟೌನ್ ತಂಡವು ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ.