ಮುಂಬೈ: ಮುಂಬೈ ಇಂಡಿಯನ್ಸ್ ತಂಡ ಮೊದಲ 20 ಓವರ್ಗಳಲ್ಲಿ 234 ರನ್ ಗಳಿಸಿದೆ. ರೊಮಾರಿಯೊ ಶೆಫರ್ಡ್ ಕೊನೆಯ ಓವರ್ನಲ್ಲಿ 32 ರನ್ ಗಳಿಸಿದರೆ, ರೋಹಿತ್ ಶರ್ಮಾ 49 ರನ್, ಇಶಾನ್ ಕಿಶನ್ 42 ರನ್ ಮತ್ತು ಹಾರ್ದಿಕ್ ಪಾಂಡ್ಯ 39 ರನ್ ಗಳಿಸಿದರು. ಹೌದು ರೋಹಿತ್ ಶರ್ಮಾ, ಇಶಾನ್ ಕಿಶನ್, ಟಿಮ್ ಡೇವಿಡ್ ಹಾಗೂ ರೊಮ್ಯಾರಿಯೋ ಶೆಫರ್ಡ್ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ತಂಡವು 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 235 ರನ್ ಬಾರಿಸಿದ್ದು, ಡೆಲ್ಲಿ ಕ್ಯಾಪಿಟಲ್ಸ್ಗೆ ಸವಾಲಿನ ಗುರಿ ನೀಡಿದೆ.
ಇಲ್ಲಿನ ವಾಂಖೇಡೆ ಮೈದಾನದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಮುಂಬೈ ಇಂಡಿಯನ್ಸ್ ತಂಡಕ್ಕೆ ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ಇಶಾನ್ ಕಿಶನ್ ಸ್ಪೋಟಕ ಆರಂಭ ಒದಗಿಸಿಕೊಟ್ಟರು. ಮೊದಲೇ ಹ್ಯಾಟ್ರಿಕ್ ಸೋಲಿನಿಂದ ಕಂಗೆಟ್ಟಿದ್ದ ಮುಂಬೈ ಇಂಡಿಯನ್ಸ್ ತಂಡಕ್ಕೆ ಉತ್ತಮ ಆರಂಭದ ಅಗತ್ಯವಿತ್ತು. ರೋಹಿತ್ ಶರ್ಮಾ ಹಾಗೂ ಇಶಾನ್ ಕಿಶನ್ ಮೊದಲ 7 ಓವರ್ಗೆ 80 ರನ್ಗಳ ಜತೆಯಾಟವಾಡುವ ಮೂಲಕ ಭರ್ಜರಿ ಆರಂಭ ಒದಗಿಸಿಕೊಟ್ಟರು.
PUC ಪಾಸಾದವರಿಗೆ ಉದ್ಯೋಗವಕಾಶ! ಪರೀಕ್ಷೆ ಇಲ್ಲದೆ ನೇರ ನೇಮಕಾತಿ – ತಿಂಗಳಿಗೆ ₹63,000 ಸಂಬಳ.!
ಡೆಲ್ಲಿ ಬೌಲರ್ಗಳನ್ನು ಮನಬಂದಂತೆ ದಂಡಿಸಿದ ರೋಹಿತ್ ಶರ್ಮಾ ಕೇವಲ 27 ಎಸೆತಗಳನ್ನು ಎದುರಿಸಿ 6 ಬೌಂಡರಿ ಹಾಗೂ ಮೂರು ಸಿಕ್ಸರ್ ಸಹಿತ 49 ರನ್ ಬಾರಿಸಿ ಅಕ್ಷರ್ ಪಟೇಲ್ಗೆ ವಿಕೆಟ್ ಒಪ್ಪಿಸಿದರು. ಇನ್ನು ಇದರ ಬೆನ್ನಲ್ಲೇ ಈ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಮೊದಲ ಪಂದ್ಯವನ್ನಾಡಿದ ಸೂರ್ಯಕುಮಾರ್ ಯಾದವ್ ಕೇವಲ ಎರಡು ಎಸೆತಗಳನ್ನು ಎದುರಿಸಿ ಶೂನ್ಯ ಸುತ್ತಿ ಏನ್ರಿಚ್ ನೋಕಿಯಾಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದರು.
ಇನ್ನು ಮತ್ತೊಂದು ತುದಿಯಲ್ಲಿ ಚುರುಕಿನ ಬ್ಯಾಟಿಂಗ್ ನಡೆಸಿದ ಇಶಾನ್ ಕಿಶನ್ ಕೇವಲ 23 ಎಸೆತಗಳನ್ನು ಎದುರಿಸಿ 4 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 42 ರನ್ ಗಳಿಸಿ ಅಕ್ಷರ್ ಪಟೇಲ್ಗೆ ಎರಡನೇ ಬಲಿಯಾದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ತಿಲಕ್ ವರ್ಮಾ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ವಿಫಲರಾದರು. ಎಡಗೈ ಬ್ಯಾಟರ್ ತಿಲಕ್ ವರ್ಮಾ ಕೇವಲ 6 ರನ್ ಗಳಿಸಿ ಎಡಗೈ ವೇಗಿ ಖಲೀಲ್ ಅಹಮ್ಮದ್ಗೆ ವಿಕೆಟ್ ಒಪ್ಪಿಸಿದರು.